ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 7 ಮಂದಿಗೆ ಕೋವಿಡ್ ಪ್ರಕರಣ ದೃಢಪಟ್ಟಿದೆ. ಯಾವುದೇ ಸಾವಿನ ವರದಿಯಾಗಿಲ್ಲ. 5 ಮಂದಿ ಗುಣಮುಖರಾಗಿದ್ದಾರೆ. ಸದ್ಯ 35 ಸಕ್ರಿಯ ಪ್ರಕರಣಗಳಿವೆ. ಈವರೆಗೆ 1851 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಶೇ. 1.52 ರಷ್ಟು ಪಾಸಿಟಿವಿಟಿ ದರ ಇದೆ.
Advertisement
ಉಡುಪಿ ಜಿಲ್ಲೆಯಲ್ಲಿ ಶನಿವಾರ 6 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 275 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಒಬ್ಬರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
14 ಪ್ರಕರಣಗಳು ಸಕ್ರಿಯವಾಗಿವೆ. 113 ಮಂದಿ ಮೊದಲ ಬಾರಿಗೆ, 257 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು. 240 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡರು.