Advertisement
ಜಿಲ್ಲೆಯ ಮೆಡಿಕಲ್ ವಸತಿ ನಿಲಯದ 10 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಮಂಗಳೂರು ತಾಲೂಕಿನ ವಸತಿ ಸಮುಚ್ಚಯದ 7 ಮಂದಿಯಲ್ಲಿ ಮತ್ತು ಕಾಪ್ರಿಗುಡ್ಡದ ನಿರ್ಮಾಣ ಹಂತದ ಕಾಮಗಾರಿ ಪ್ರದೇಶದಲ್ಲಿ 8 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ ಶೇ. 5.73 ಪಾಸಿಟಿವಿಟಿ ದರ ದಾಖಲಾಗಿದೆ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 250 ಮಂದಿಗೆ ಕೊರೊನಾ ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇ. 6.29ಕ್ಕೆ ಏರಿಕೆದೆ. 13 ಮಂದಿ ಕೋವಿಡ್ ಕೇರ್ ಸೆಂಟರ್‌ಗೆ, 16 ಮಂದಿ ಕೋವಿಡ್ ಆಸ್ಪತ್ರೆಗೆ ಹಾಗೂ 221 ಮಂದಿ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3,960 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. 66 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,342 ಪ್ರಕರಣಗಳು ಸಕ್ರಿಯವಾಗಿವೆ. 17 ವಿದ್ಯಾರ್ಥಿಗಳಿಗೆ ಕೊರೊನಾ
ಬ್ರಹ್ಮಾವರ: ಇಲ್ಲಿನ ಸ.ಹಿ.ಪ್ರಾ. ಶಾಲೆಯ ಓರ್ವ ಶಿಕ್ಷಕಿ ಹಾಗೂ 17 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದಾಖಲಾಗಿದೆ. ಎಲ್ಲರೂ ಹೋಂ ಐಸೊಲೇಶನ್‌ಲ್ಲಿದ್ದು, ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಶುಕ್ರವಾರ ಪ್ರಾರಂಭದಲ್ಲಿ ಇಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಆನಂತರ ಸಂಖ್ಯೆ ಹೆಚ್ಚತೊಡಗಿತು. ಶಾಲೆಯನ್ನು ಸ್ಯಾನಿಟೈಸ್‌ಗೊಳಿಸಲಾಗಿದ್ದು, ಗುರುವಾರ ಪುನರಾರಂಭಗೊಳ್ಳುವ ನಿರೀಕ್ಷೆ ಇದೆ.
Related Articles
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 118 ಮಂದಿಗೆ ಕೊರೊನಾ ದೃಢಪಟ್ಟಿದೆ. 45 ಮಂದಿ ಗುಣಮುಖರಾಗಿದ್ದಾರೆ. 869 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಐವರಿಗೆ ಒಮಿಕ್ರಾನ್ ದೃಢಪಟ್ಟಿದೆ.
Advertisement
ಕೇರಳದಲ್ಲಿ 9,066 ಪ್ರಕರಣಕೇರಳದಲ್ಲಿ ಮಂಗಳವಾರ 9,066 ಮಂದಿಗೆ ಕೊರೊನಾ ದೃಢಪಟ್ಟಿದೆ. 2,064 ಮಂದಿ ಗುಣಮುಖರಾಗಿದ್ದಾರೆ. 19 ಮಂದಿ ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 50,053ಕ್ಕೇರಿದೆ. 44,441 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡಗು: 27 ಮಂದಿಗೆ ಕೊರೊನಾ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 27 ಮಂದಿಗೆ ಕೊರೊನಾ ದೃಢಪಟ್ಟಿದೆ. 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 289 ಸಕ್ರಿಯ ಪ್ರಕರಣಗಳಿವೆ. ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 54 ಆಗಿದೆ. ಪಾಸಿಟಿವಿಟಿ ದರ ಶೇ. 0.84 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಲಸಿಕೆ ಮಾಹಿತಿ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,845 ಮಂದಿಗೆ ಮೊದಲ ಡೋಸ್, 2,410 ಮಂದಿಗೆ ಎರಡನೇ ಡೋಸ್ ಮತ್ತು 2,032 ಮಂದಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ 913 ಮಂದಿ ಕೋವಿಡ್ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡರು.