Advertisement

ಕಟೀಲು ಯಕ್ಷಗಾನ ಮೇಳಗಳಿಗೆ ಧ್ವನಿವರ್ಧಕ ಬಳಕೆ ಮೇಲಿನ ನಿರ್ಬಂಧ ತೆರವು

07:15 PM Dec 02, 2022 | Team Udayavani |

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮೇಳಗಳಿಗೆ ರಾತ್ರಿ 12 ರವರೆಗೆ ಧ್ವನಿವರ್ಧಕಗಳ ಬಳಕೆಗೆ ಹೇರಲಾಗಿದ್ದ ನಿರ್ಬಂಧ ಸಡಿಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ತಿಳಿಸಿದ್ದಾರೆ.

Advertisement

ರಾತ್ರಿ 10ರ ನಂತರ ಧ್ವನಿವರ್ಧಕಗಳ ಬಳಕೆ ಸುಪ್ರೀಂ ಕೋರ್ಟ್‌ನಿಂದ ನಿಷೇಧ ಹೇರಲಾಗಿತ್ತು.ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯ ಭಕ್ತರು ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಗೆ ಸಡಿಲಿಕೆ ಕೋರಿ ಮನವಿ ಪತ್ರ ಸಲ್ಲಿಸಿದ್ದರು.

ಕಟೀಲು ದೇವಸ್ಥಾನದ ಅಧಿಕಾರಿಗಳು ಮತ್ತು ಭಕ್ತರೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಿಸಿ ಹೇಳಿದ್ದಾರೆ.

ಕಟೀಲು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳೊಂದಿಗೆ ಸಭೆ ನಡೆಸಿ, ಯಕ್ಷಗಾನ ಪ್ರದರ್ಶನಕ್ಕೆ ರಾತ್ರಿ 12 ಗಂಟೆಯವರೆಗೆ ನಿರ್ಬಂಧವನ್ನು ತೆರವು ಮಾಡಲು ನಿರ್ಧರಿಸಿದ್ದೇನೆ. ಅಲ್ಲದೆ, ರಾತ್ರಿ ವೇಳೆ ದೈವಾರಾಧನೆ ಅಥವಾ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳ ಬಳಕೆಯನ್ನು ಸಡಿಲಿಸುವ ಪರವಾಗಿ ಯಾವುದೇ ಸಲಹೆಗಳು ಬಂದರೆ ನಾನು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next