ಮಂಗಳೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಇಂದು ಸೋಮೇಶ್ವರ, ಉಚ್ಚಿಲ, ಪೆರಿಬೈಲ್, ಬಟ್ಟಂಪಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದರು.
ಕಡಲ್ಕೊರೆತ ಉಂಟಾದ ಪ್ರದೇಶಗಳು, ಹಾನಿಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಇಲ್ಲಿನ ಜನಪ್ರತಿನಿಧಿಗಳ ಸಹಾಯದಿಂದ ಕಡಲ್ಕೊರೆತ ಕಡಿಮೆ ಮಾಡಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮೇಲಾಧಿಕಾರಿಗಳ ಗಮನ ಸೆಳೆಯುವುದಾಗಿ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹೇಳಿದರು.
ಈ ಸಂದರ್ಭದಲ್ಲಿ ಸೋಮೇಶ್ವರ ಪುರಸಭಾ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಕಂದಾಯ ಅಧಿಕಾರಿ ಸ್ಟೀಫನ್, ಪುರಸಭೆ ಆಯುಕ್ತ ವಾಣಿ ಆಳ್ವ, ಪುರಸಭೆ ಅಧ್ಯಕ್ಷರಾಜೇಶ್ ಉಚ್ಚಿಲ್, ಸದಸ್ಯ ಸಚಿನ್ ಉಪಸ್ಥಿತರಿದ್ದರು.