Advertisement

ಕೋವಿಡ್ ಸೋಂಕಿನಿಂದ ಗುಣಮುಖರಾದ ದ.ಕ ಜಿಲ್ಲಾ ಆರೋಗ್ಯಾಧಿಕಾರಿ

05:47 PM Jul 15, 2020 | keerthan |

ಮಂಗಳೂರು: ಇತ್ತೀಚೆಗೆ ಕೋವಿಡ್-19 ಸೋಂಕು ದೃಢವಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಯವರು ಸದ್ಯ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

Advertisement

ಇವರಿಗೆ ಕಳೆದ ಜುಲೈ 2 ರಂದು ಕೋವಿಡ್-19 ಸೋಂಕು ದೃಢವಾಗಿತ್ತು.  ನಂತರ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಸಂದರ್ಭದಲ್ಲಿ ಎರಡು ಬಾರಿ ಅವರ ಸ್ವ್ಯಾಬ್ ಟೆಸ್ಟ್ ಮಾಡಿದ ಸಂದರ್ಭದಲ್ಲಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಮಂಗಳವಾರ 91 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next