Advertisement
ಉಡುಪಿ: 5 ಮಂದಿಗೆ ಕೋವಿಡ್ ಸೋಂಕುಉಡುಪಿ: ಜಿಲ್ಲೆಯಲ್ಲಿ ಸೋಮವಾರ 5 ಮಂದಿಗೆ ಸೋಂಕು ದೃಢಪಟ್ಟಿದೆ. 3,056 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 4 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 43 ಪ್ರಕರಣಗಳು ಸಕ್ರಿಯವಾಗಿವೆ.
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 99 ಮಂದಿಗೆ ಸೋಂಕು ದೃಢಪಟ್ಟಿದ್ದು 72 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 745 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಕೊಡಗು: 8 ಮಂದಿಗೆ ಕೋವಿಡ್ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ 8 ಮಂದಿಗೆ ಸೋಂಕು ದೃಢಪಟ್ಟಿದೆ. 23 ಮಂದಿ ಗುಣಮುಖರಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. 82 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 1.66ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ. ಸಿ. ಸತೀಶ ತಿಳಿಸಿದ್ದಾರೆ.