Advertisement

ದ.ಕ. ಜಿಲ್ಲೆ: 15 ಮಂದಿಗೆ ಕೋವಿಡ್‌ ಸೋಂಕು

02:10 AM Nov 07, 2021 | Team Udayavani |

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ 15 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಸಾವು ವರದಿಯಾಗಿಲ್ಲ. ಜಿಲ್ಲೆಯಲ್ಲಿ 22 ಮಂದಿ ಗುಣಮುಖರಾಗಿದ್ದಾರೆ. ಸದ್ಯ 179 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ. 0.29 ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.

Advertisement

ಉಡುಪಿ: 10 ಮಂದಿಗೆ ಸೋಂಕು
ಉಡುಪಿ: ಜಿಲ್ಲೆಯಲ್ಲಿ ಶನಿವಾರ 10 ಮಂದಿಗೆ ಸೋಂಕು ದೃಢಪಟ್ಟಿದೆ. 6 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.

ಕಾಸರಗೋಡು: 99 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 99 ಮಂದಿಗೆ ಸೋಂಕು ದೃಢಪಟ್ಟಿದ್ದು 110 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 729 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.

ಕೇರಳದಲ್ಲಿ 6,546 ಮಂದಿಗೆ ಸೋಂಕು
ರಾಜ್ಯದಲ್ಲಿ ಶನಿವಾರ 6,546 ಮಂದಿಗೆ ಸೋಂಕು ದೃಢಪಟ್ಟಿದ್ದು 6,934 ಮಂದಿ ಗುಣಮುಖರಾಗಿದ್ದಾರೆ. 50 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಇರುವ ರಾಜ್ಯಗಳಲ್ಲಿ ಇಂಧನ ಬೆಲೆ ಇಳಿಕೆ ಆಗಿದೆಯಾ: ಪ್ರಹ್ಲಾದ ಜೋಶಿ

Advertisement

ಕೊಡಗು: ಒಬ್ಬರಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಶನಿವಾರ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸದ್ಯ 97 ಸಕ್ರಿಯ ಪ್ರಕರಣಗಳಿದ್ದರೆ 33 ಮಂದಿ ಬಿಡುಗಡೆಯಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next