Advertisement
ಶನಿವಾರ 77 ಮಂದಿಯ ಗಂಟಲ ದ್ರವ ಮಾದರಿಯನ್ನು ಕಳುಹಿಸಿಕೊಡಲಾಗಿದೆ. ಒಟ್ಟು 65 ವರದಿಗಳು ಬರಲು ಬಾಕಿ ಇವೆ. 4 ಮಂದಿ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. 106 ಮಂದಿಯನ್ನು ಹೊಸದಾಗಿ ತಪಾಸಣೆಗೊಳಪಡಿಸಲಾಗಿದೆ. 30 ಮಂದಿ ಸುರತ್ಕಲ್‌ನಲ್ಲಿ ಹಾಗೂ 10 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.
ಜಿಲ್ಲೆಯಿಂದ ಈವರೆಗೆ ಒಟ್ಟು 15,919 ಮಂದಿ ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ, ಝಾರ್ಖಂಡ್ ರಾಜ್ಯಗಳಿಗೆ ಶ್ರಮಿಕ್ ವಿಶೇಷ ರೈಲಿನಲ್ಲಿ ಕಳುಹಿಸಿಕೊಡಲಾಗಿದೆ. ಪುತ್ತೂರಿನಿಂದ ಉತ್ತರ ಪ್ರದೇಶಕ್ಕೆ ಹಾಗೂ ಕಂಕನಾಡಿ ಜಂಕ್ಷನ್ ರೈಲು ನಿಲ್ದಾಣದಿಂದ ಝಾರ್ಖಂಡ್ ರಾಜ್ಯಕ್ಕೆ ಪ್ರತ್ಯೇಕ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.