Advertisement
ಮಂಗಳೂರು ನಗರದಲ್ಲಿ ಕಳೆದ ಎರಡು ದಿನಕ್ಕೆ ಹೋಲಿಕೆ ಮಾಡಿದರೆ ಮಳೆ ಪ್ರಮಾಣ ತುಸು ತಗ್ಗಿದೆ. ಆದರೆ ಬೆಳಗ್ಗಿನಿಂದಲೇ ಬಿಟ್ಟು ಬಿಟ್ಟು ಮಳೆಯಾಗುತ್ತಿತ್ತು. ಉಳಿದಂತೆ ಮೋಡ ಕವಿದ ವಾತಾವರಣ ಇತ್ತು. ಪುತ್ತೂರು, ಉಪ್ಪಿನಂಗಡಿ, ಸುಳ್ಯ, ಸುಬ್ರಹ್ಮಣ್ಯ, ವಿಟ್ಲ, ಕಾಸರಗೋಡು, ಕನ್ಯಾನ, ಬಂಟ್ವಾಳ, ಬಿ.ಸಿ.ರೋಡು, ಸುರತ್ಕಲ್, ಉಳ್ಳಾಲ, ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ, ಮಡಂತ್ಯಾರು, ವೇಣೂರು, ಕಲ್ಮಕಾರು, ಗುತ್ತಿಗಾರು, ಕಿನ್ನಿಗೋಳಿ, ಕಡಬ ಸೇರಿದಂತೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಮಳೆಯಾಗಿದೆ.
ಕಳೆದ ಕೆಲ ದಿನಗಳಿಂದ ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರೂ ಜೂ. 1ರಿಂದ ಜು. 24ರ ವರೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಶೇ. 39, ಬಂಟ್ವಾಳ ತಾಲೂಕಿನಲ್ಲಿ ಶೇ.33, ಮಂಗಳೂರು ತಾಲೂಕಿನಲ್ಲಿ ಶೇ. 32, ಪುತ್ತೂರು ತಾಲೂಕಿನಲ್ಲಿ ಶೇ. 43 ಮತ್ತು ಸುಳ್ಯ ತಾಲೂಕಿನಲ್ಲಿ ಶೇ. 43ರಷ್ಟು ಮಳೆ ಕೊರತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
Related Articles
ಉಡುಪಿ ನಗರದಾದ್ಯಂತ ಬುಧವಾರ ಸಂಜೆ ಬಳಿಕ ಉತ್ತಮ ಮಳೆಯಾಗಿದೆ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜು. 24ರ ವರೆಗೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು.
Advertisement
ಬುಧವಾರ ಬೆಳಗ್ಗಿನಿಂದ ಬಿಸಿಲಿನ ವಾತಾವರಣವಿತ್ತು. ಸಂಜೆ ವೇಳೆಗೆ ನಿರಂತರ ಮಳೆ ಸುರಿಯಲಾರಂಭಿಸಿತು. ಸಿದ್ಧಾಪುರ, ಕಾರ್ಕಳ, ಕುಂದಾಪುರ, ಬ್ರಹ್ಮಾವರ, ತೆಕ್ಕಟ್ಟೆ, ಕಾಪು, ಕಟಪಾಡಿ, ಮಲ್ಪೆ, ಶಿರ್ವ, ಕೊಲ್ಲೂರು, ಕೋಟೇಶ್ವರ ಭಾಗಗಳಲ್ಲಿ ಉತ್ತಮ ಮಳೆ ಸುರಿಯಿತು. ಮಳೆ ಹಿನ್ನೆಲೆಯಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಗುರುವಾರ ಎಂದಿನಂತೆ ಶಾಲಾ ಕಾಲೇಜುಗಳು ಇರಲಿವೆ.
ಮನೆ ಕುಸಿತಪುತ್ತೂರು: ಸಾಮೆತ್ತಡ್ಕ ಅಂಬೇಡ್ಕರ್ ಕಾಲನಿಯಲ್ಲಿ ಬುಧವಾರ ಮನೆಯೊಂದು ಕುಸಿದು ಬಿದ್ದಿದೆ. ಮಂಗಳವಾರ ರಾತ್ರಿ ಪುತ್ತೂರು ನಗರದಲ್ಲಿ ಪಶು ಆಸ್ಪತ್ರೆಯ ಆವರಣ ಗೋಡೆ ಕುಸಿದಿದೆ.