ಮಂಗಳೂರು: ದಕ್ಷಿಣ ಕನ್ನಡದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲಾಗಿದ್ದು, ಒಂದು ತಿಂಗಳಿನಲ್ಲಿ 2,81,975 ಮಂದಿಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ. 27,762 ಮಂದಿಗೆ ಮೊದಲನೇ ಡೋಸ್ ಲಸಿಕೆ ನೀಡ ಲಾಗಿದ್ದು, 2,54,213 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಕಳೆದ ಕೆಲವು ದಿನ ಗಳಿಂದ ಲಸಿಕಾ ಅಭಿಯಾನಕ್ಕೆ ಹಿನ್ನಡೆಯಾಗಿತ್ತು. ಈ ಹಿನ್ನೆಲೆ ಯಲ್ಲಿ ಆಶಾ ಕಾರ್ಯ ಕರ್ತೆಯರು, ಆರೋಗ್ಯ ಇಲಾಖೆ ಸಿಬಂದಿ ಜತೆ ಜಿಲ್ಲೆಯ ವಿವಿಧ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಕೂಡ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ.
ಕೆಲವು ಮಂದಿ ಮೊದಲನೇ ಡೋಸನ್ನೇ ಇನ್ನೂ ಪಡೆದುಕೊಂಡಿಲ್ಲ. ಅವರು ಲಸಿಕೆ ಪಡೆದುಕೊಳ್ಳುವಂತೆ ಪ್ರೇರೇಪಿಸಲು ಅವರ ಮನೆಗೆ ಲಸಿಕಾ ಮಿತ್ರರನ್ನು ಕಳುಹಿಸಿಕೊಡಲಾಗುತ್ತಿದೆ. ಇದಕ್ಕೆಂದು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಅಲ್ಲಿನ ಹತ್ತಿರದ ಎನ್ನೆಸ್ಸೆಸ್ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ:ತನ್ನ ಕಾರು ತಡೆದರೆಂದು ಪೊಲೀಸರಿಗೆ ಅಮಾನತು ಬೆದರಿಕೆ ಹಾಕಿದ ಬಿಹಾರ ಸಚಿವ !
ಮಂಗಳೂರು ಮನಪಾ ವ್ಯಾಪ್ತಿಯ ಎಲ್ಲರೂ ಕೊರೊನಾ ರೋಗ ನಿರೋಧಕ ಲಸಿಕೆ ಪಡೆಯಲು ಪ್ರೇರೇಪಿಸುವ ಉದ್ದೇಶ ದಿಂದ ವಾರ್ ರೂಂ ತೆರೆಯಲಾಗಿದೆ. ಒಂದು ವಾರದಲ್ಲಿ ಅಂದರೆ ನ. 22ರಿಂದ 28ರವರೆಗೆ 11,466 ಮಂದಿ ಮೊದಲ ಡೋಸ್ ಮತ್ತು 1,08,937 ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.