Advertisement
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಶುಕ್ರವಾರದಿಂದ ಖಾಸಗಿ ವಾಹನಗಳ ಸಂಚಾರವನ್ನು ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇಧಿಸಲಾಗಿದೆ. ಅನುಮತಿ ಇಲ್ಲದಿರುವ ಎಲ್ಲ ವಾಹನಗಳಿಗೆ ಇದು ಅನ್ವಯಿಸುತ್ತದೆ. ದಿನಸಿ ಖರೀದಿಗಾಗಿ ಮೀಸಲಿಟ್ಟಿರುವ ಬೆಳಗ್ಗೆ 7ರಿಂದ 12ರ ವರೆಗಿನ ಸಮಯದಲ್ಲಿ ಬದಲಾವಣೆ ಇಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮನೆ ಸಮೀಪದ ಅಂಗಡಿಗಳಿಂದ ಖರೀದಿ ಮಾಡಬಹುದು ಎಂದರು.
2.71 ಲಕ್ಷ ಬಿಪಿಎಲ್ ಕುಟುಂಬಗಳಿಗೆ ಗುರುವಾರದಿಂದ ಪಡಿತರ ವಿತರಣೆ ನಡೆಯುತ್ತಿದೆ. ಪಡಿತರ ಕೇಂದ್ರದಿಂದ ದೂರವಾಣಿ ಕರೆ ಬರುವ ಗ್ರಾಹಕರು ಆಗಮಿಸಿ ಪಡಿತರ ಪಡೆಯಲು ಅವಕಾಶ ವಿದೆ. ಈ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಬ್ಬ ವ್ಯಕ್ತಿಗೆ 10 ಕೆಜಿಯಂತೆ ಅಕ್ಕಿ ವಿತರಿಸಲಾಗುತ್ತದೆ. ಸುಮಾರು 80 ಕೆಜಿಗಿಂತ ಅಧಿಕ ಅಕ್ಕಿ ಪಡೆಯುವವರಿಗೆ ಪಡಿತರ ಅಂಗಡಿಯವರಿಂದಲೇ ವಾಹನದ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ 1077 ನಂಬರಿಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಸಚಿವರು ತಿಳಿಸಿದರು. ಕೋವಿಡ್ 19 ವಿರುದ್ಧ ಹೋರಾಟಕ್ಕಾಗಿ ಎ. 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ
ಮೋಂಬತ್ತಿ, ಹಣತೆ ಬೆಳಗುವಂತೆ ಪ್ರಧಾನಿ ಕರೆ ನೀಡಿದ್ದು ಜಿಲ್ಲೆಯ ಜನತೆ ಸಂಪೂರ್ಣ ಬೆಂಬಲ ನೀಡುವಂತೆ ಕೋರಿದರು.
Related Articles
ತಲಪಾಡಿ ಗಡಿಯಲ್ಲಿ ರಸ್ತೆಯನ್ನು ಈಗಾಗಲೇ ಬಂದ್ ಮಾಡಲಾಗಿದೆ. ಇದನ್ನು ತೆರವು
ಮಾಡುವಂತೆ ಕೇರಳದ ಕೆಲವು ಜನಪ್ರತಿನಿಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ದ.ಕ. ಜಿಲ್ಲಾಡಳಿತದ ಪರವಾಗಿಯೂ ಅನುಭವಿ ವಕೀಲರನ್ನು ಈ ಕುರಿತಂತೆವಾದ ನಡೆಸಲು ನೇಮಿಸಲಾಗಿದೆ. ಜಿಲ್ಲೆಯ ಹಿತರಕ್ಷಣೆಯಿಂದ ಗಡಿ ತೆರೆಯವುದು ಬೇಡ ಎಂದು ಮುಖ್ಯಮಂತ್ರಿಗಳೂ ತಿಳಿಸಿದ್ದಾರೆ. ಹೀಗಾಗಿ ದ.ಕ. ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.
Advertisement
ಆಶಾ ಕಾರ್ಯಕರ್ತೆಯರಿಗೆ ರಕ್ಷಣೆಕೇವಲ ಗೌರವಧನ ಪಡೆದು, ಜನರ ಆರೋಗ್ಯದ ದೃಷ್ಟಿಯಿಂದ ಮನೆಮನೆಗೆ ಬರುವ ಆಶಾ ಕಾರ್ಯಕರ್ತೆಯರನ್ನು ಗೌರವದಿಂದ ಕಾಣಬೇಕು. ಆಶಾ ಕಾರ್ಯಕರ್ತೆಯರ ವಿರುದ್ಧ ಕಾನೂನು ಕೈಗೆತ್ತಿಕೊಳ್ಳುವ ಪ್ರಕರಣ ಎಲ್ಲಿಯಾದರು ಕಂಡುಬಂದರೆ, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ. ನಮ್ಮ ಪ್ರಾಣ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರ ಬಗ್ಗೆ ಜನರು ಸಹಾನುಭೂತಿಯಿಂದ ವರ್ತಿಸಬೇಕು ಎಂದು ಕೋಟ ತಿಳಿಸಿದರು.