Advertisement

ಗೃಹ ಸಚಿವರ ವಿರುದ್ಧ ಏಕವಚನ ಬಳಕೆಗೆ ವಿಷಾದ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್

06:23 PM Aug 15, 2020 | sudhir |

ಬೆಂಗಳೂರು: ನಗರದ ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಏಕವಚನ ಪ್ರಯೋಗವಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್ ಸಚಿವ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಅವರು ಅಲಂಕರಿಸಿರುವ ಗೃಹ ಸಚಿವ ಸ್ಥಾನದ ಬಗ್ಗೆ ತಮಗೆ ಗೌರವವಿದೆ ಆದರೆ ನಾನು ಉದ್ದೇಶಪೂರ್ವಕವಾಗಿ ತಾವು ಏಕವಚನ ಬಳಸಲಿಲ್ಲ. ಮಾತಿನ ಓಘದಲ್ಲಿ ಪ್ರಮಾದವಶಾತ್ ಪ್ರಯೋಗವಾಗಿದೆ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರು ಗಲಭೆಗೆ ಕಾಂಗ್ರೆಸ್ ನವರ ಆಂತರಿಕ ಭಿನ್ನಾಬಿಪ್ರಾಯಗಳೇ ಕಾರಣ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದರು ಇದಕ್ಕೆ ಪ್ರತಿಕ್ರೀಯಿಸಿದ ಡಿಕೆ ಶಿವಕುಮಾರ್ ನಮ್ಮ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿವೆ ಎನ್ನಲು ಅವನು ಯಾರು? ಸಬ್ ಇನ್‌ಸ್ಪೆಕ್ಟರಾ ? ಅಥವಾ ಅವನು ಆಥಾರಿಟಿನಾ? ಎಂದು ಗೃಹ ಸಚಿವರ ವಿರುದ್ಧ ಏಕವಚನದಲ್ಲಿ ಹೇಳಿಕೆಯನ್ನು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next