Advertisement

ಯಾವುದೇ ಕಾರಣಕ್ಕೂ ಸದನ ಮೊಟಕುಗೊಳಿಸಲು ಬಿಡುವುದಿಲ್ಲ: ಡಿಕೆಶಿ

12:56 PM Sep 21, 2020 | sudhir |

ಬೆಂಗಳೂರು: ಹಗರಣಗಳು ಬಯಲಾಗುವ ಭಯದಿಂದ ರಾಜ್ಯ ಸರಕಾರವು ಅಧಿವೇಶನವನ್ನು ಮೂರೇ ದಿನಕ್ಕೆ ಮೊಟಕುಗೊಳಿಸಲು ಪ್ರಯತ್ನಿಸುತ್ತಿದ್ದು, ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರು ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅಧಿವೇಶನವನ್ನು 3 ದಿನಗಳಿಗೆ ಮೊಟಕುಗೊಳಿಸಲು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ನನಗೆ ಮತ್ತು ಸಿದ್ದರಾಮಯ್ಯಗೆ ಕರೆ ಮಾಡಿದ್ದರು. ಆದರೆ ನಾವು ಮೊಟಕುಗೊಳಿಸಲು ಬಿಡುವುದಿಲ್ಲ ಎಂದರು.

ರಾಜ್ಯದಲ್ಲಿ ಬರ, ನೆರೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೇಂದ್ರ ಪರಿಹಾರ ಕೊಡುತ್ತಿಲ್ಲ. ಇದೆಲ್ಲ ಚರ್ಚೆಯಾಗಬೇಕಿದೆ. ಸರಕಾರದಲ್ಲಿ ನಡೆದಿರುವ ಭಾರೀ ಭ್ರಷ್ಟಾಚಾರಕ್ಕೆ ನಮ್ಮ ಸಹಕಾರ ಇಲ್ಲ. ಬಿಜೆಪಿ ಪ್ರಜಾಪ್ರಭುತ್ವ ಮುಗಿಸಲು ಹೊರಟಿದೆ. ನಾವು ಸದನ ಮೊಟಕುಗೊಳಿಸಲು ಬಿಡುವುದಿಲ್ಲ. ಇನ್ನೂ ಒಂದಷ್ಟು ದಿನ ಸದನ ಮುಂದುವರಿಸುವಂತೆ ಕೇಳುತ್ತೇವೆ. ಸದನ ನಡೆಸಿದರೆ ಇವರ ಭ್ರಷ್ಟಾಚಾರ ಹೊರಗೆ ಬರುತ್ತದೆ. ಇವರು ಸಿಕ್ಕಿ ಹಾಕಿಕೊಂಡಿ¨ªಾರೆ. ಹೀಗಾಗಿ ಸದನ ನಡೆಸುವುದು ಬೇಡ ಎಂಬ ಚಿಂತನೆಯಲ್ಲಿದ್ದಾರೆ ಎಂದು ಹೇಳಿದರು.

“ಪಕ್ಷ ಸೇರಲು 60 ಹಿರಿಯರ ಬಯಕೆ’
ಬೆಂಗಳೂರು, ಸೆ. 20: ಕಾಂಗ್ರೆಸ್‌ ಬಿಟ್ಟು ಹೋಗಿರುವ 60 ಹಿರಿಯ ನಾಯಕರು ಮರಳಿ ಪಕ್ಷಕ್ಕೆ ಬರಲು ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ. ಕೆ. ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಜೆಡಿಎಸ್‌ ಮುಖಂಡ ರಮೇಶ್‌ ಬಾಬು ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ ಕೊಂಡು ಮಾತನಾಡಿದ ಅವರು, ಪಕ್ಷಕ್ಕೆ ಮರಳಲು ಮುಂದಾಗಿರುವವರನ್ನು ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಸಮಿತಿ ರಚನೆ ಮಾಡಿದ್ದು, ಎಲ್ಲ ರೀತಿಯಲ್ಲೂ ಪರಿಶೀಲಿಸಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

ರಮೇಶ್‌ ಬಾಬು ಕೂಡ ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತೇನೆಂದು ಅರ್ಜಿ ಹಾಕಿದ್ದರು. ಸದ್ಯದಲ್ಲೇ ವಿಧಾನ ಪರಿಷತ್‌ ಚುನಾವಣೆ ಬರುವುದರಿಂದ ರಮೇಶ್‌ ಬಾಬು ಕಾಂಗ್ರೆಸ್‌ ಸೇರ್ಪಡೆಗೆ ಒಪ್ಪಿಕೊಂಡೆವು ಎಂದರು.

ರಮೇಶ್‌ ಬಾಬು ಅವರು ಮಾತನಾಡಿ, ಸಿದ್ದರಾಮಯ್ಯನವರು ಜನತಾದಳದ ರಾಜ್ಯಾಧ್ಯಕ್ಷ ಆಗಿದ್ದಾಗ ನನ್ನನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದರು. ಚಳವಳಿ ರೂಪದಲ್ಲಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾನು ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿ ಯಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next