Advertisement

ಚಾಮರಾಜನಗರ ದುರಂತದಲ್ಲಿ ಸತ್ತವರಿಗೆ ಕೋವಿಡ್‌ ಮರಣ ಪ್ರಮಾಣ ಪತ್ರ ಕೊಟ್ಟಿಲ್ಲ : ಡಿಕೆಶಿ

08:40 PM Jul 02, 2021 | Team Udayavani |

ಬೆಂಗಳೂರು: ಚಾಮರಾಜನಗರ ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರಿಗೆ ಕೋವಿಡ್‌ ಸಾವು ಎಂದು ಮರಣ ಪ್ರಮಾಣ ಪತ್ರ ನೀಡುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 3.30 ಲಕ್ಷ ಕೋವಿಡ್‌ ಸಾವುಗಳ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ. ಚಾಮರಾಜನಗರದಲ್ಲಿ ಒಂದೇ ದಿನ 65 ಮಂದಿ ಆಕ್ಸಿಜನ್‌ ಸಿಗದೆ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ 36 ಮಂದಿ ಎಂಬ ವರದಿ ಕೊಡಲಾಗಿದೆ. ನಾನು 36 ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ಕೊಟ್ಟಿದ್ದೆ. ಇವರಲ್ಲಿ ಯಾರಿಗೂ ಸರ್ಕಾರ ಕೋವಿಡ್‌ ಸಾವು ಎಂದು ಮರಣ ಪ್ರಮಾಣ ಪತ್ರ ಕೊಟ್ಟಿಲ್ಲ ಎಂದು ದೂರಿದರು.

ಆಂಧ್ರಪ್ರದೇಶ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಮೃತರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದೇವೆ. ಈ ಸೋಂಕಿನಿಂದ ಸತ್ತವರ ಮಾಹಿತಿ ಪಡೆಯಲು ಸರ್ಕಾರ ಡೆತ್‌ ಆಡಿಟ್‌ ಮಾಡಿ ಅವರಿಗೆ ಪರಿಹಾರ ನೀಡಬೇಕು ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.

ರಾಜ್ಯ ಸರ್ಕಾರ ಕೊರೊನಾ ಸಾವಿನ ಸುಳ್ಳು ಲೆಕ್ಕ ನೀಡುತ್ತಿದೆ. ಬೀದರ್‌ ಒಂದೇ ಜಿಲ್ಲೆಯಲ್ಲಿ ಸರ್ಕಾರ ಹೇಗೆ ಸುಳ್ಳು ಸಾವಿನ ಲೆಕ್ಕ ನೀಡುತ್ತಿದೆ ಎಂದು ನಮ್ಮ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರು ಅಂಕಿ-ಸಂಖ್ಯೆ ಸಮೇತ ಬಹಿರಂಗಗೊಳಿಸಿದ್ದಾರೆ ಎಂದು ತಿಳಿಸಿದರು.

ಇದೇ ಕಾರಣಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಪ್ರತಿ ಮನೆಗೂ ಹೋಗಿ ಅವರ ಮಾಹಿತಿ ಪಡೆದು, ಅವರಿಗೆ ಪರಿಹಾರ ಸಿಗುವಂತೆ ಮಾಡಬೇಕೆಂದು ಸೂಚನೆ ಕೊಟ್ಟಿದ್ದೇವೆ. ನಾವು ಈ ಸಂಕಷ್ಟದ ಸಮಯದಲ್ಲಿ ಜನರ ಬೆನ್ನಿಗೆ ನಿಲ್ಲುತ್ತೇವೆ ಎಂದು ತಿಳಿಸಿದರು.

Advertisement

ಇದನ್ನೂ ಓದಿ : ಗೋವಾ : ಜುಲೈ 12 ರ ತನಕ ಕರ್ಫ್ಯೂ ವಿಸ್ತರಣೆ : ಮುಖ್ಯಮಂತ್ರಿ ಸಾವಂತ್

ಪ್ರತಿಕ್ರಿಯಿಸುವುದಿಲ್ಲ
ವಿಜಯೇಂದ್ರ ಅವರ ಹೆಸರಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಆಪ್ತ ಸಹಾಯಕರ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next