Advertisement

“ನೀರಾವರಿ ಯೋಜನೆಗಳ ಜಾರಿಗೆ ಕಾಂಗ್ರೆಸ್‌ ಹೋರಾಟ’

11:54 PM Dec 29, 2022 | Team Udayavani |

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಆಗಿರುವ ಅನ್ಯಾಯದ ವಿರುದ್ಧ ಡಿ. 30ರಂದು ವಿಜಯಪುರದಲ್ಲಿ ಹಾಗೂ ಮಹದಾಯಿ ಯೋಜನೆ ಜಾರಿ ವಿಚಾರವಾಗಿ ಜ. 2ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Advertisement

ಸುವರ್ಣಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನೀರಾವರಿ ಹೋರಾಟಗಳಿಂದಾಗಿ ಕಾಂಗ್ರೆಸ್‌ ಪಕ್ಷಕ್ಕೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರಕಾರ ಈಗ ಕಳಸಾ ಬಂಡೂರಿ ಯೋಜನಾ ವಿಸ್ತೃತ ವರದಿಗೆ ಅನುಮೋದನೆ ನೀಡಿದೆ. ಅವರು ಏನು ಬೇಕಾದರೂ ಮಾಡಲಿ. ನಾವು ನಮ್ಮ ವಿಚಾರವನ್ನು ಜನರ ಮುಂದೆ ಇಡುತ್ತೇವೆ ಎಂದು ತಿಳಿಸಿದರು.

ಸದನದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲೆ ಬಿಡುಗಡೆ ಮಾಡುವುದಾಗಿ ಆಡಳಿತ ಪಕ್ಷ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬ್ರಹ್ಮಾಂಡ ಭ್ರಷ್ಟಾಚಾರ, ಮತ ಕಳ್ಳತನ ವಿಚಾರ ಚರ್ಚೆಗೆ 2 ಗಂಟೆಗಳ ಅವಕಾಶ ನೀಡಿ, ರಾತ್ರಿ 8 ಗಂಟೆವರೆಗೂ ಅಧಿವೇಶನ ನಡೆಸಿ ಎಂದು ಮನವಿ ಮಾಡಿಕೊಂಡೆವು. ಆದರೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಅವರ ವರದಿ ಸಲ್ಲಿಸಿ ಓಡಿ ಹೋಗಿದ್ದಾರೆ. ಈ ವಿಚಾರ ಚರ್ಚೆಗೆ ಅವಕಾಶ ನೀಡಲಿಲ್ಲ. ಈ ವಿಚಾರವನ್ನು ನಾವು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಜನರ ಧ್ವನಿಯನ್ನು ಎತ್ತಿ ಹಿಡಿಯುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next