Advertisement

ಡಿಕೆಶಿ ಪ್ರಕರಣ: ವಿಚಾರಣೆ ಮುಂದಕ್ಕೆ

10:48 PM Mar 17, 2023 | Team Udayavani |

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾ.24ರವರೆಗೆ ಹೈಕೋರ್ಟ್‌ ವಿಸ್ತರಿಸಿದೆ.

Advertisement

ಸಿಬಿಐ ತನಿಖೆ ರದ್ದು ಕೋರಿ ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಕೆ.ನಟರಾಜನ್‌ ಅವರ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್‌ ವಾದ ಮಂಡಿಸಿ, ಅರ್ಜಿದಾರರ ವಿರುದ್ಧದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ತೆರವು ಕೋರಿ ಸಿಬಿಐ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ಪರಿಗಣಿಸಬೇಕು ಎಂದು ಕೋರಿದರು.

ಕಾಲಾವಕಾಶದ ಕೊರತೆಯಿಂದ ಅರ್ಜಿ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿದ ನ್ಯಾಯಪೀಠ, ಅಲ್ಲಿಯವರಗೆ ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಿತು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ.ಶಿವಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್ಐಆರ್‌ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Advertisement

ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next