ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚಾಗಿದೆ. ಕಾಂಗ್ರೆಸ್ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸರ್ವಜ್ಞನಗರ ಕ್ಷೇತ್ರದಲ್ಲಿ ಡಿಜಿಟಲ್ ಸದಸ್ಯತ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಪ್ರಸ್ತುತ ರಾಜ್ಯಕ್ಕೆ ಅನಿವಾರ್ಯವಾಗಿದೆ ಎಂದು ಹೇಳಿದರು.
ಮೇಕೆದಾಟು ಪಾದಯಾತ್ರೆ ಒಂದು ಐತಿಹಾಸಿಕ ಹೋರಾಟ. ನೀವೆಲ್ಲ ಬಂದು ಹೆಜ್ಜೆ ಹಾಕಿ, ಐತಿಹಾಸಿಕ ಹೋರಾಟದಲ್ಲಿ ಭಾಗವಹಿಸಿದ್ದೀರಿ. ಬೆಂಗಳೂರಿಗೆ ಕುಡಿಯುವ ನೀರು ತರಲು ನಡೆದ ಕಾಂಗ್ರೆಸ್ ನೇತೃತ್ವದ ಹೋರಾಟಕ್ಕೆ ಶಕ್ತಿ ತುಂಬಿದ್ದೀರಿ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಸದಸ್ಯರಾಗುವುದೇ ಒಂದು ಅದೃಷ್ಟ. ಈ ತ್ರಿವರ್ಣ ಧ್ವಜವನ್ನು ಧರಿಸುವ ಭಾಗ್ಯ ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಸಿಗುತ್ತದೆಯೇ ಇಲ್ಲ. ಹೀಗಾಗಿ ಈಗ ಸುವರ್ಣ ಅವಕಾಶ ಎಂದು ಹೇಳಿದರು.
ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಮೇಯರ್ ಪದ್ಮಾವತಿ ಸೇರಿ ಹಲವರು ಉಪಸ್ಥಿತರಿದ್ದರು.