Advertisement
ಮೇಕೆದಾಟು ಸಂಗಮದಲ್ಲಿ ಸರ್ವಧರ್ಮಗುರುಗಳು ಸಸಿಗಳಿಗೆ ನೀರೆರೆಯುವ ಮೂಲಕ ನಡಿಗೆ ಆರಂಭಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಹೋರಾಟಕ್ಕೆ ಜೋಶ್ ತುಂಬಿದರು.
Related Articles
Advertisement
ಪಾದಯಾತ್ರೆ ನಡೆಯುವ ದಿಗಳಲ್ಲಿ ಪ್ರತಿನಿತ್ಯ ತಲಾ ಒಂದು ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿ ದ್ದಾರೆ. ಮೊದಲ ದಿನ ಭಾನುವಾರ ಪಕ್ಷದ ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರಿಗೆ ಹಾಗೂ ಚಾಮರಾಜನಗರ ಹಾಗೂ ಕೊಡಗು ವ್ಯಾಪ್ತಿಯ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕೊಡಲಾಗಿದೆ.
ಎರಡನೇ ದಿನ ಚಾಮರಾಜನಗರ ಜಿಲ್ಲೆ ಹಾಗೂ ಕನಕಪುರ ಕ್ಷೇತ್ರ, ಮೂರನೇ ದಿನದ ಪಾದಯಾತ್ರೆಯಲ್ಲಿ ಚಾಮರಾಜನಗರ ಲೋಕಸಭಾ ಹಾಗೂ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. 4ನೇ ದಿನದ ಪಾದಯಾತ್ರೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, 5ನೇ ದಿನ ಮಂಡ್ಯ ಹಾಗೂ ರಾಮನಗರ ಜಿಲ್ಲೆ , 6ನೇ ದಿನ ತುಮಕೂರು ಲೋಕಸಭಾ ಕ್ಷೇತ್ರ ಹಾಗೂ ಮಾಗಡಿ ವಿಧಾನ ಸಭಾ ಕ್ಷೇತ್ರದ ಮುಖಂಡರು,ಕಾರ್ಯಕರ್ತರು ಪಾದಯಾತ್ರೆ ಯಲ್ಲಿ ಭಾಗವಹಿಸಲಿದ್ದಾರೆ.
7ನೇ ದಿನ ಬೆಂಗಳೂರು ನಗರ ವ್ಯಾಪ್ತಿಯ ನೆಲಮಂಗಲ, ವಿಜಯನಗರ ರಾಜರಾಜೇಶ್ವರಿ ನಗರ, ಬಸವನಗುಡಿ, ಯಶವಂತಪುರ, ಗೋವಿಂದರಾಜನಗರ, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರ, 8ನೇ ದಿನ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೆಂಗಳೂರಿನ ಬೊಮ್ಮನಹಳ್ಳಿ,ಬಿಟಿಎಂ ಲೇಔಟ್ , ಜಯನಗರ, ಶಾಂತಿನಗರ,ಬೆಂಗಳೂರು ದಕ್ಷಿಣ ಹಾಗೂ ಸಿ.ವಿ.ರಾಮನ್ ನಗರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಭಾಗವಹಿಸುವರು.
9ನೇ ದಿನದ ಪಾದಯಾತ್ರೆಯಲ್ಲಿ ಹೊಸಕೋಟೆ, ಯಲಹಂಕ, ಹೆಬ್ಟಾಳ, ಗಾಂಧಿನಗರ, ರಾಜಾಜಿನಗರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ದೇವನಹಳ್ಳಿ ಸೇರಿದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 11ನೇ ದಿನ ಚಿಕ್ಕಪೇಟೆ, ಶಿವಾಜಿ ನಗರ, ದಾಸರಹಳ್ಳಿ, ಗಾಂಧಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೀದರ್, ಶಿವಮೊಗ್ಗ, ಕಲಬುರ್ಗಿ, ಬಳ್ಳಾರಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಗಳಿಂದ ಮುಖಂಡರು ಕಾರ್ಯಕರ್ತರ ಸಮ್ಮಿಲನದಲ್ಲಿ ಪಾದಯಾತ್ರೆ ಸಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂಬ ಮಾಹಿತಿ ಇದೆ.