Advertisement

ಡಿಕೆಶಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

10:16 AM Oct 12, 2019 | Team Udayavani |

ಬೆಂಗಳೂರು: ಐಟಿ ದಾಳಿ ವೇಳೆ ದೆಹಲಿಯ ನಿವಾಸಗಳಲ್ಲಿ ಸಿಕ್ಕ 8.6 ಕೋಟಿ ರೂ. ದಾಖಲೆ ಇಲ್ಲದ ಹಣ ಪತ್ತೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಮತ್ತವರ ಆಪ್ತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌, ತೀರ್ಪು ಕಾಯ್ದಿರಿಸಿದೆ.

Advertisement

ಪ್ರಕರಣದ ಆರೋಪದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಮತ್ತವರ ಆಪ್ತರಾದ ಆಂಜನೇಯ ಹನುಮಂತಯ್ಯ ಹಾಗೂ ಎನ್‌. ರಾಜೇಂದ್ರ ಹೈಕೋರ್ಟ್‌ಗೆ ಕ್ರಿಮಿನಲ್‌ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಎ. ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರು ಹಾಗೂ ಪ್ರತಿವಾದಿ ಆದಾಯ ತೆರಿಗೆ ಇಲಾಖೆ ಪರ ವಕೀಲರ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿರುವುದಾಗಿ ಹೇಳಿತು.

ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್‌ ಈಗಾಗಲೇ ಮಧ್ಯಂತರ ತಡೆಯಾಜ್ಞೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next