Advertisement

ಸದನದಲ್ಲಿ ರೈತರ ಜಮೀನು ದಾರಿ ಸಮಸ್ಯೆ ಚರ್ಚಿಸಲು ಡಿ.ಕೆ. ಶಿವಕುಮಾರಗೆ ಆಗ್ರಹ

03:45 PM Oct 18, 2021 | Shwetha M |

ವಿಜಯಪುರ: ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಇತ್ಯರ್ಥ ಪಡಿಸಲು ಹಾಗೂ ಬೆಳೆ ಪರಿಹಾರ ಒದಗಿಸಲು ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ ಮಾಜಿ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರೊಂದಿಗೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಚರ್ಚಿಸಿದರು.

Advertisement

ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಕುರಿತು ರೈತರು ಡಿ.ಕೆ. ಶಿವಕುಮಾರ ಅವರೊಂದಿಗೆ ಚರ್ಚಿಸಿದರು. ರೈತರು ದಾರಿ ವಿಷಯವಾಗಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಸುಮಾರು 9 ಬಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ದಾರಿ ವಿಷಯ ಕುರಿತು ಚರ್ಚಿಸಿ ಮನವಿ ಸಲ್ಲಿಸಲಾಗಿತ್ತು. ಆ ಸಂದರ್ಭದಲ್ಲಿ ಏಕೆ ಮಾಡಲಿಲ್ಲ ಎಂದು ರೈತರು ಡಿ.ಕೆ. ಶಿವಕುಮಾರ ಅವರನ್ನು ಪ್ರಶ್ನಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ, ಮುಂಬರುವ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿಶೇಷ ಗಮನ ಹರಿಸಿ ದಾರಿ ಸಮಸ್ಯೆಯನ್ನು ಚರ್ಚಿಸಲಾಗುತ್ತದೆ. ಅಲ್ಲದೇ ಈ ಬಗ್ಗೆ ಕಾನೂನು ತಿದ್ದುಪಡಿ ಮಾಡಲು ಸರ್ಕಾರದ ಮೇಲೆ ಒತ್ತಡ ತರುತ್ತೇನೆಂದು ಭರವಸೆ ನೀಡಿದರು.

ಬೆಳೆ ಪರಿಹಾರ ಒದಗಿಸಬೇಕು. ಆಲಮಟ್ಟಿ ಶಾಸ್ತ್ರಿ ಆಣೆಕಟ್ಟು ನೀರಿನ ಮಟ್ಟವನ್ನು 524.256 ಮೀ.ಗೆ ನಿಲ್ಲಿಸಲು ಮುಂಬರುವ ಅಧಿವೇಶನದಲ್ಲಿ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಾಪುಗೌಡ ಪಾಟೀಲ, ಸಚಿನ ಮೇಘಾ, ಮೈಬೂಬ ತಾಂಬೋಳ್ಳಿ, ಗಂಗಾಧರ ಸಂಬಣ್ಣಿ, ಮಂಜುನಾಥ ಬುದ್ನಿ ಸೇರಿದಂತೆ ಇತರರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next