Advertisement

ಡಿಕೆ ಶಿವಕುಮಾರ್‌ ಅಭಿಮಾನಿಗಳ ಸಂಘದ ಸಭೆ

07:00 AM Jul 31, 2017 | Team Udayavani |

ಮಡಿಕೇರಿ: ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ನಾಲ್ಕು ವರ್ಷಗಳ ಸಾಧನೆಯನ್ನು ಜನರಿಗೆ ಮನವರಿಕೆ ಮಾಡುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕೆಂದು ಕಾಂಗ್ರೆಸ್‌ ಮುಖಂಡರೂ ಹಾಗೂ ಜಿ.ಪಂ ಸದಸ್ಯರಾದ ಕೆ.ಪಿ. ಚಂದ್ರಕಲಾ ಕರೆ ನೀಡಿದ್ದಾರೆ.

Advertisement

ನಗರದ ಕೂರ್ಗ್‌ ಕಮ್ಯುನಿಟಿ ಹಾಲ್‌ನಲ್ಲಿ ನಡೆದ ಅಖೀಲ ಕರ್ನಾಟಕ ಡಿ.ಕೆ.ಶಿವಕುಮಾರ್‌ ಅಭಿಮಾನಿಗಳ ಸಂಘದ ಜಿಲ್ಲಾ ಘಟಕದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ರಾಜ್ಯ ಸರಕಾರ ಜನಸಾಮಾನ್ಯರ ಸರಕಾರ ವಾಗಿ ಕಳೆದ ವರ್ಷಗಳ ಕಾಲ ಎಲ್ಲ  ಕ್ಷೇತ್ರಗಳಲ್ಲೂ ಯಶಸ್ಸನ್ನು ಸಾಧಿಸಿ ಜನಪ್ರಿಯವಾಗಿದೆ. ಬರಪರಿಸ್ಥಿತಿ ಇದ್ದರೂ ಅದನ್ನು ಯಶಸ್ವಿಯಾಗಿ ನಿಭಾಯಿಸಿದ ಹೆಗ್ಗಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಮಳೆಯ ಕೊರತೆಯ ನಡುವೆಯೂ ಸಾಕಷ್ಟು ವಿದ್ಯುತ್‌ ಪೂರೈಕೆಯಾಗಲು ಅಗತ್ಯ ಕ್ರಮಗಳನ್ನು ಕೈಗೊಂಡ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರು ಒಬ್ಬ ಸಮರ್ಥ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಕೆ.ಪಿ. ಚಂದ್ರಕಲಾ ಶ್ಲಾ ಸಿದರು.

ಸರಕಾರದ ಸಾಧನೆಯನ್ನು ಜನರ ಬಳಿಗೆ ಕೊಂಡೊಯ್ಯಿರಿ ಎಂದು ಅವರು ಕಾರ್ಯ ಕರ್ತರಿಗೆ ಕರೆ ನೀಡಿದರು.

ಸಿದ್ದರಾಮಯ್ಯ ಯಶಸ್ವಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಕಾರ್ಮಿಕ ಘಟಕದ ಅಧ್ಯಕ್ಷರಾದ ವಿ.ಪಿ. ಶಶಿಧರ್‌ ಮಾತನಾಡಿ, ಹಸಿವು ಮುಕ್ತ ಕರ್ನಾಟಕವನ್ನು ರೂಪಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದಾರೆ, ಅಲ್ಲದೆ ಸಾಮಾ ಜಿಕ ನ್ಯಾಯವನ್ನು ಒದಗಿಸಿದ್ದಾರೆ ಎಂದು ಬಣ್ಣಿಸಿದರು. ಸಚಿವ ಡಿ.ಕೆ. ಶಿವಕುಮಾರ್‌ ಅವರ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
  
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾ ಡಿದ ಡಿ.ಕೆ. ಶಿವಕುಮಾರ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರಾದ ಎಂ.ಎ. ನವೀದ್‌ ಖಾನ್‌, ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದೆಂದರು. ಸಭೆ ಯಲ್ಲಿ ನೂತನ ಪದಾಧಿಕಾರಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಅನಂತರದ ದಿನಗಳಲ್ಲಿ ಉಳಿದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೆಂದು ಅವರು ತಿಳಿಸಿದರು.

ಸಭೆಯಲ್ಲಿ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ನೂತನ ಪದಾಧಿಕಾರಿಗಳು  
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹೊಸತೋಟ ಕೆ.ಪಿ. ದಿನೇಶ್‌, ಉಪಾಧ್ಯಕ್ಷರಾಗಿ ಗಾಯತ್ರಿ ನರಸಿಂಹ, ಖಜಾಂಚಿಯಾಗಿ ಕೆ.ಪಿ .ಸಿದ್ದಿಕ್‌, ಸಮಿತಿ ಸದಸ್ಯರುಗಳಾಗಿ ಹನೀಫ್ ಸಂಪಾಜೆ, ಎಂ.ಎನ್‌. ಅಶೋಕ್‌ ಯಡವಾರೆ, ಪಿ.ಎ. ಶಾಫಿ ಕೊಟ್ಟಮುಡಿ, ಅಬ್ದುಲ್‌ ರಜಾ‚ಕ್‌, ಕೆ.ಪಿ. ಚೇಕ್‌, ಚಂದನ್‌ ಕುಮಾರ್‌, ಗುರುರಾಜ್‌, ರಜಿತ್‌ ಕುಮಾರ್‌ ಆಯ್ಕೆಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next