ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ಅರ್ಧಕ್ಕೆ ಮೊಟಕುಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೆ ಕಾರಣ ಹಿರಿಯ ನಾಯಕರ ಸಲಹೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮೊದಲನೆ ಅಲೆ ತಬ್ಲಿಘಿ, ಮೂರನೆ ಅಲೆ ಕಾಂಗ್ರೆಸ್ ಹಬ್ಬಿಸುತ್ತಿದೆ: ಸಚಿವ ಸುನಿಲ್
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಯಕರು ಈ ಸಲಹೆ ನೀಡಿದ್ದಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಬೆಂಬಲ ಸಿಗುತ್ತಿರುವುದು ನಿಜ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸದ್ಯಕ್ಕೆ ಸ್ಥಗಿತಗೊಳಿಸಿ ಮತ್ತೆ ಪಾದಯಾತ್ರೆ ನಡೆಸೋಣ ಎಂಬ ಸಲಹೆಯನ್ನು ಹಿರಿಯರು ನೀಡಿದ್ದಾರೆ ಎನ್ನಲಾಗಿದೆ.
ಒಂದೆಡೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಕೋವಿಡ್ ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಈ ಅವಧಿಯಲ್ಲಿ ರಾಜ್ಯದಲ್ಲೂ ಪಾದಯಾತ್ರೆ ನಡೆದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಸದ್ಯಕ್ಕೆ ಪಾದಯಾತ್ರೆ ನಿಲ್ಲಿಸಿ ಎಂಬುದು ಹಿರಿಯರ ಸಲಹೆ.
ಇದೆಲ್ಲದರ ಮಧ್ಯೆ ರಾಜ್ಯ ಸರಕಾರವೂ ಪಾದಯಾತ್ರೆ ಬೆಂಗಳೂರು ತಲುಪದಂತೆ ತಡೆಯಲು ಯೋಜನೆ ರೂಪಿಸುತ್ತಿದೆ.