Advertisement
ಬುಧವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು…
Related Articles
Advertisement
ಕೇಂದ್ರ ನಾಯಕರು ಪ್ರತಿಕ್ರಿಯೆ ನೀಡುತ್ತಾರೆ:
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ನಮ್ಮ ನಾಯಕರು ಹಾಗೂ ವಕ್ತಾರರು ಪ್ರತಿಕ್ರಿಯೆ ನೀಡುತ್ತಾರೆ.
ಲೂಟಿ ಹೊಡೆದಿರೋದು ಸರ್ಕಾರ ಮತ್ತು ಮಂತ್ರಿಗಳು:
ಕೋವಿಡ್ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳು ಲೂಟಿ ಮಾಡಿದ್ದಾರೆ ಎಂದು ನಾವು ಹೇಳಿಲ್ಲ. ಸರ್ಕಾರ ಹಾಗೂ ಮಂತ್ರಿಗಳು ಲೂಟಿ ಮಾಡಿದ್ದಾರೆ. ನಿಮಗೆ ಕೇವಲ ಅಧಿಕಾರಿಗಳು ಕಾಣಿಸುತ್ತಿದ್ದಾರಾ? ನಾವು ಸದನದಲ್ಲೂ ಇದನ್ನೇ ಹೇಳಿದ್ದೇವೆ. ಪಿಪಿಇ ಕಿಟ್ ನಿಂದ ಚಿಕಿತ್ಸಾ ಸಲಕರಣೆಗಳ ಖರೀದಿವರೆಗೂ, ಹಾಸಿಗೆಯಿಂದ ಕಾರ್ಮಿಕರ ಊಟದ ಬಿಲ್ ವರೆಗೂ, ಆಂಬುಲೆನ್ಸ್ ನಿಂದ ಆಹಾರ ಕಿಟ್ ವರೆಗೂ ಹೀಗೆ ಪ್ರತಿ ವಿಚಾರದಲ್ಲಿ ಸರ್ಕಾರ ಲೂಟಿ ಹೊಡೆದಿದೆ. ಇದು ಎಲ್ಲರಿಗೂ ತಿಳಿದಿರುವ ಸತ್ಯ.