ಬೆಂಗಳೂರು: ಡಿ.ಕೆ.ಶಿವಕುಮಾರ್ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಝೂಮ್ ಆಪ್ಸ್ ಮೂಲಕ ಸುಮಾರು10 ರಿಂದ 15 ಲಕ್ಷ ಜನ ವೀಕ್ಷಣೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 7800 ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ.
ಸುಮಾರು 10ರಿಂದ 15ಲಕ್ಷ ಜನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಆಹ್ವಾನಿತರಷ್ಟೇ ಬರಬೇಕು. ಪ್ರತಿಜ್ಞೆ ಕಾರ್ಯಕ್ರಮದ ಮೂಲಕ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯನ್ನು ಜನತೆಯ ಮುಂದೆ ಇಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಕೋವಿಡ್ -19 ಸೊಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರವನ್ನು ಸರ್ಕಾರ ಗೌರವಯುತವಾಗಿ ಮಾಡಬೇಕು. ಆದರೆ, ರಾಜ್ಯದ ಕೆಲವು ಕಡೆ ರೋಗಿಗಳ ಶವವನ್ನು ಅಮಾನವೀಯವಾಗಿ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ. ಸರ್ಕಾರ ಸರಿಯಾಗಿ ನಡೆದುಕೊಳ್ಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಹೋರಾಟ ಮಾಡಲಾಗುವುದು ಎಂದು ಉಗ್ರಪ್ಪ ಎಚ್ಚರಿಸಿದರು.