ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುತ್ತದೆ ಆದರೆ, ಕೊರೊನಾ ಲಸಿಕೆ ವಿಚಾರದಲ್ಲಿ ಗುಜರಾತ್ ಮಾಡೆಲ್ ಪಾಲನೆಯಾಗಿದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಲಸಿಕೆ ಹಂಚಿಕೆಯಲ್ಲಿ ತಾರತಮ್ಯವಾಗಿದ್ದು ಗುಜರಾತಿಗೆಷ್ಟು ಪೂರೈಕೆಯಾಗಿದೆ, ಕರ್ನಾಟಕಕ್ಕೆಷ್ಟು ಪೂರೈಕೆ ಎಂಬುದರ ಬಗ್ಗೆ ಲೆಕ್ಕ ನೀಡಲಿ ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಎಲ್ಲ ಮಾಡಲಾಯ್ತು. ವ್ಯಾಪಾರಿಗಳು ಉದ್ಯಮಿಗಳ ಪರ ಅಂತಾ ಬಿಂಬಿಸಿಕೊಂಡ ಬಿಜೆಪಿ ಲಾಕ್ ಡೌನ್ ಹಿನ್ನೆಲೆಯಲ್ಲಿ ತೆರಿಗೆ ಯಾಕೆ ಮನ್ನಾ ಮಾಡಲಿಲ್ಲ. ನಿರುದ್ಯೋಗ ಸೃಷ್ಟಿಸಿದ್ದೇ ಗುಜರಾತ್ ಮಾಡೆಲ್ಲಾ. ಸರ್ಕಾರದವರು ಅಧ್ಯಯನ ಮಾಡಲು ಗುಜರಾತಿಗೆ ಹೋಗಲಿ, ನಮ್ಮ ಅಭ್ಯಂತರವಿಲ್ಲ. ನಮ್ಮ ಜನರಿಗೆ ನ್ಯಾಯ ಒದಗಿಸಲಿ ಎಂದು ಹೇಳಿದರು.
ಇದನ್ನೂ ಓದಿ :ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಸಚಿವೆ ಶೋಭಾ ಕರಂದ್ಲಾಜೆ
ಗುಜರಾತ್‌ಗೆ ನೀಡಿರುವ ಲಸಿಕೆಯಲ್ಲಿ ಶೇ.50 ರಷ್ಟೂ ನಮ್ಮ ರಾಜ್ಯಕ್ಕೆ ನೀಡಲಿಲ್ಲ. ಬಿಜೆಪಿಗೆ ಗುಜರಾತ್ ಮಾತ್ರ ಆದ್ಯತೆಯಾ ಎಂದು ಪ್ರಶ್ನಿಸಿದರು.