Advertisement

ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದೆ: ಡಿ.ಕೆ ಶಿವಕುಮಾರ್

02:13 PM Nov 11, 2020 | sudhir |

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.

Advertisement

ಬಾಗಲಕೋಟೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಮಾತನಾಡಿದ ಡಿಕೆಶಿ.

‘ಇದು ಬಿಜೆಪಿಯ ಸಂಸ್ಕೃತಿ . ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬಂತಾಗಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾರ್ಪೊರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ ಆದರೆ ಪ್ರಕರಣಗಳು ದಾಖಲಾಗಲಿಲ್ಲ.

ಇದನ್ನೂ ಓದಿ:ರಾಜ್ಯದ ‘ಆರೋಗ್ಯ ಸಚಿವ’ರಿಗೆ ಹಸಿರು ಪಟಾಕಿ ಎಂದರೇನೆಂದು ಗೊತ್ತಿಲ್ಲವಂತೆ!

ಬೇರೆ ಯಾರಾದರೂ ಇಂತಹ ಘಟನೆ ನಡೆಸಿದರೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಈ ಘಟನೆ ಪೊಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದ ಅವರು ಸಿದ್ದು ಸವದಿ ಮೇಲೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ನಾವು ಕಾದು ನೋಡುತ್ತಿದ್ದೇವೆ. ಇವರ ಕ್ರಮದ ನಂತರ ನಾವು ಮಾತನಾಡುತ್ತೇವೆ. ಈ ವಿಚಾರವನ್ನು ನಾನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡುತ್ತೇನೆ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next