Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು.
Related Articles
Advertisement
ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. 28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ” ಎಂದರು.
ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂದು ಕೇಳಿದಾಗ, “ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ನೀವು (ಮಾಧ್ಯಮಗಳು) ದೊಡ್ಡದಾಗಿ ಬಿಂಬಿಸುತ್ತೀರಿ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ನಿಮ್ಮ ಘನತೆ ಯಾಕೆ ಹಾಳುಮಾಡಿಕೊಳ್ಳುತ್ತೀರಿ” ಎಂದು ಪ್ರತಿಕ್ರಿಯಿಸಿದರು.
ಅವರ ಬೆಂಬಲಿಗರಿಗೆ ನಿಗಮ ಮಂಡಳಿ ಸ್ಥಾನದ ವಿಚಾರವಾಗಿ ಬೇಸರವಾಗಿದೆ ಎಂದು ಕೇಳಿದಾಗ, “ಇಲ್ಲಿ ಅವರ ಬೆಂಬಲಿಗರು, ನನ್ನ ಬೆಂಬಲಿಗರು ಎಂಬುದಿಲ್ಲ. ಎಲ್ಲ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಗರು. ನನಗೆ, ಸಿಎಂ, ಗೃಹ ಸಚಿವರಿಗೆ ಬೆಂಬಲಿಗರು ಇಲ್ಲ. ಇರುವವರೆಲ್ಲಾ ಕಾಂಗ್ರೆಸ್ ಬೆಂಬಲಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ನಾವು ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಧಿಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೈದು ಸಚಿವರನ್ನು ನೇಮಕ ಮಾಡಲಾಗದೇ ಮುಖ್ಯಮಂತ್ರಿಗಳೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗಣ ಬಿದ್ದದ್ದು, ಮೊದಲು ಅದನ್ನು ನೋಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.