ಚಿಕ್ಕಮಗಳೂರು: ತಿಹಾರ್ ಜೈಲಿನಿಂದ ಬಂದವರು ರಾಜ್ಯಾಧ್ಯಕ್ಷ ಹುದ್ದೆಗೆ ಭಡ್ತಿ ಎಂಬ ಬಿಜೆಪಿ ಟ್ವೀಟ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, “ರಾಜಕೀಯ ಪ್ರೇರಿತವಾಗಿ ನನ್ನನ್ನ ಜೈಲಿಗೆ ಹಾಕಿದ್ದು, ಭ್ರಷ್ಟಾಚಾರ ಮಾಡಿ ಹೋಗಿಲ್ಲ” ಎಂದಿದ್ದಾರೆ.
ನನ್ನ ಮೇಲೆ ಯಾವುದೇ ರೌಡಿಶೀಟರ್ ಕೇಸ್ ಇಲ್ಲ. ಯಡಿಯೂರಪ್ಪನ್ನು ಜೈಲಿಗೆ ಹೋಗಿ ಬಂದಿದ್ದಾರೆ. ಅಮಿತ್ ಶಾ ಕೂಡ ಜೈಲಿಗೆ ಹೋಗಿ ಬಂದಿದ್ದಾರೆ. ನಾನು ಜೈಲಿಗೆ ಹೋಗಿ ಬಂದಿದ್ದೇನೆ. ರಾಜಕೀಯ ಪ್ರೇರಿತವಾಗಿ ನನ್ನನ್ನ ಜೈಲಿಗೆ ಹಾಕಿದ್ದು, ಭ್ರಷ್ಟಾಚಾರ ಮಾಡಿ ಹೋಗಿಲ್ಲ ಎಂದರು.
ಇದನ್ನೂ ಓದಿ:ಬೇಟಿ ಬಚಾವೋ ಮಹಾಪಂಚಾಯತ್ ಸಭಾ ಕಾರ್ಯಕ್ರಮದಲ್ಲಿ ಮಹಿಳೆಯಿಂದ ವ್ಯಕ್ತಿಗೆ ಚಪ್ಪಲಿ ಏಟು!
ಅವರ ತಟ್ಟೆಯಲ್ಲಿ ದೊಡ್ಡ ಹೆಗ್ಗಣ ಬಿದ್ದಿದೆ, ಅದನ್ನ ಮೊದಲು ನೋಡಿಕೊಳ್ಳಲಿ ಮತದಾನದ ಹಕ್ಕನ್ನೇ ಮಾರಲು ಹೊರಟವರು ಬಿಜೆಪಿಯವರು ಎಂದು ಮೂಡಿಗೆರೆಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.