ಬೆಂಗಳೂರು: ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬ ಎಂ.ಬಿ ಪಾಟೀಲ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ’ ಎಂದರು.
“ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದರು.
ಇದನ್ನೂ ಓದಿ:Fort;ಯಾವ ರಾಜನಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಾಗದ ಜಂಜೀರಾ ಕೋಟೆ ಬಗ್ಗೆ ಗೊತ್ತಾ?
ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಸೋಮವಾರ ಹೇಳಿಕೆ ನೀಡಿದ್ದರು.