Advertisement

ಡಿಕೆಶಿ ಪರ ಸಿದ್ದರಾಮಯ್ಯ ಬ್ಯಾಟಿಂಗ್‌

06:50 AM Sep 20, 2018 | Team Udayavani |

ಬೆಂಗಳೂರು: ಬಿಜೆಪಿಯ ಕೇಂದ್ರ ನಾಯಕರು ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಮಾಡುತ್ತಿರುವ ಆರೋಪ ಆಧಾರ ರಹಿತವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟರೇ ಬೇರೆ ಏನೂ ಗೊತ್ತಿಲ್ಲ. ಅವರು ಯಾವತ್ತೂ ಸತ್ಯ ಹೇಳಿಲ್ಲ. ಡಿ.ಕೆ.ಶಿವಕುಮಾರ್‌ ವಿರುದ್ಧ ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದಾರೆ. ನಾನೂ ಡಿ.ಕೆ.ಶಿವಕುಮಾರ್‌ ಜೊತೆ ಮಾತನಾಡಿದ್ದೇನೆ. ಅವರ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ ಎಂದು ತಿಳಿಸಿದರು.

ಶಿವಕುಮಾರ್‌ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದ್ದರೆ, ಅದಕ್ಕೆ ಕೋರ್ಟ್‌ ಹಾಗೂ  ಕಾನೂನು ಎಲ್ಲವೂ ಇದೆ. ಎಫ್ಐಆರ್‌ಗೂ ಚಾರ್ಜ್‌ಶೀಟ್‌ಗೂ ವ್ಯತ್ಯಾಸ ಇದೆ. ಸುಳ್ಳು ಹೇಳುವುದೇ ಬಿಜೆಪಿಯವರ ಬಂಡವಾಳವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next