ಉಡುಪಿ: ಪ್ರಮೋದ್ ಮಧ್ವರಾಜ್ ಅವರಿಗೆ ಕಾಂಗ್ರೆಸ್ ಎಲ್ಲವನ್ನು ನೀಡಿದೆ. ಕಾಂಗ್ರೆಸ್ ಪಕ್ಷವು ಅವರಿಗೆ ಅಪ್ಪನಿಗೆ, ಅಮ್ಮನಿಗೆ ಅವಕಾಶ ನೀಡಿದೆ. ಅವರನ್ನು ಸಚಿವರನ್ನಾಗಿ ಮಾಡಿದೆ. ಆದರೂ ಪಕ್ಷಕ್ಕೆ ದ್ರೋಹ ಮಾಡಿ ಬಿಜೆಪಿಗೆ ಹೋದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಮೋದ್ ಮಧ್ವರಾಜ್ ಅವರ ಜೊತೆ ಯಾರೂ ಬಿಜೆಪಿಗೆ ಹೋಗಲಿಲ್ಲ. ಬಿಜೆಪಿಯು ಅವರಿಗೆ ಟಿಕೆಟ್ ಕೊಟ್ಟರೆ ಅವರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸುವ ಎಂದು ಹೇಳಿದರು.
ಇದನ್ನೂ ಓದಿ:ಮಕ್ಕಳೊಂದಿಗೆ ಸುಶಾಂತ್ ಸಿಂಗ್ ಬರ್ತ್ ಡೇ ಆಚರಿಸಿದ ಸಾರಾ ಆಲಿ ಖಾನ್
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಪಕ್ಷದಲ್ಲಿ ದುಡ್ಡು ತೆಗೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ, ಮತ್ತೆ ಕಾಂಗ್ರೆಸ್ ಗೆ ಬಂದು ಈಗ ಬಿಜೆಪಿಗೆ ಸೇರಿದ್ದಾರೆ. ಅಲ್ಲಿ ಹೋಗಿ ಆರ್ ಎಸ್ಎಸ್ ನನ್ನು ಹೊಗಳುತ್ತಿದ್ದಾರೆ. ಹೀಗಾಗಿ ಅವರನ್ನು ಸೋಲಿಸಿ ಮನವಿ ಮಾಡಿದರು.