Advertisement
“ಜಾಗತಿಕ ಮಟ್ಟದಲ್ಲಿ ಕನ್ನಡಿಗರು ಸೇವೆ ಸಲ್ಲಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ವಿಶ್ವದ ಅನೇಕ ನಾಯಕರು ಬೆಂಗಳೂರು ಮತ್ತು ಕರ್ನಾಟಕದ ಮುಖಾಂತರ ಭಾರತವನ್ನು ಗುರುತಿಸುತ್ತಿದ್ದಾರೆ. ಆದರೆ ಇವತ್ತು ಕರ್ನಾಟಕಕ್ಕೆ ಒಂದು ಕಳಂಕ ಕೂಡ ಬಂದಿದೆ. ಅದನ್ನು ತಪ್ಪಿಸಿ ನಮ್ಮ ರಾಜ್ಯ ಹಾಗೂ ಅಸ್ತಿತ್ವದ ಘನತೆಯನ್ನು ಕಾಪಾಡಬೇಕಿದೆ” ಎಂದು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ,
Related Articles
Advertisement
ಪ್ರಣಾಳಿಕೆಗಾಗಿ ಜನರು ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಳ್ಳಲು ಡಿ.ಕೆ ಶಿವಕುಮಾರ್ ಅವರು makekarnatakaproud@gmail.com ಇಮೇಲ್ ಐಡಿಯನ್ನು ಬಿಡುಗಡೆಗೊಳಿಸಿದ್ದು, ಮುಕ್ತವಾಗಿ ಇದರಲ್ಲಿ ತೊಡಗಿಸಿಕೊಳ್ಳಲು ಜನರಿಗೆ ಕರೆ ನೀಡಿದ್ದಾರೆ. “ನಮ್ಮ ಗ್ಲೋಬಲ್ ವಿಶನ್ ಕರ್ನಾಟಕ, ಬೆಟರ್ ಕರ್ನಾಟಕಕ್ಕಾಗಿ, ಮುಂದಿನ ಭವಿಷ್ಯಕ್ಕೋಸ್ಕರ ನಿಮ್ಮ ಸಲಹೆಯನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸಲಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸಲಹೆ-ಸೂಚನೆಗಳನ್ನು ವಿಡಿಯೋ, ಟೆಕ್ಸ್ಟ್ ಮೆಸೇಜ್ ಹಾಗೂ ವಿವರವಾದ ವರದಿಗಳ ಮೂಲಕ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡು ತಮ್ಮನ್ನು ಟ್ಯಾಗ್ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದು, ಈ ಮೂಲಕ ವೈಯಕ್ತಿಕವಾಗಿ ಜನರ ಸಲಹೆ-ಸೂಚನೆಗಳನ್ನು ಓದಿ, ಅಧ್ಯಯನ ಮಾಡಬಹುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರಾಮನಗರದ ರೇಷ್ಮೆ ಸೀರೆ, ಶಲ್ಯ ಕೊಡುಗೆ: ಅಶ್ವತ್ಥನಾರಾಯಣ