Advertisement

DK Shivakumar: ಡಿಸಿಎಂ ಹುದ್ದೆ ಬೇಕಿದ್ದವರು ಹೈಕಮಾಂಡ್‌ ಬಳಿ ಹೋಗಿ; ಡಿಕೆಶಿ

08:37 PM Jun 27, 2024 | Suhan S |

ಬೆಂಗಳೂರು: “ಹೆಚ್ಚುವರಿ ಡಿಸಿಎಂ ಬಗ್ಗೆ ಹೇಳಿಕೆ ನೀಡುವವರು ಇಲ್ಲಿ ಸಮಯ ವ್ಯರ್ಥ ಮಾಡುವುದಕ್ಕಿಂತ ಹೈಕಮಾಂಡ್‌ ಬಳಿ ಹೋಗಿ ಮಾತನಾಡಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಮ್ಮ ಎದುರಾಳಿ ಬಣಕ್ಕೆ ತಿರುಗೇಟು ನೀಡಿದರು.

Advertisement

ವಿಧಾನಸೌಧ ಆವರಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್‌ ನಾಯಕರ ಬಳಿ ಹೋಗಿ ಮಾತನಾಡಲಿ. ಮಾಧ್ಯಮಗಳು ಪ್ರಚಾರ ಮಾಡುತ್ತವೆಯೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್‌ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ’ ಎಂದು ತೀಕ್ಷ್ಣವಾಗಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಕೆ.ಎನ್‌. ರಾಜಣ್ಣ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಅಂತ ವೈದ್ಯರ ಬಳಿ ಹೋದರೆ, ಔಷಧಿ ನೀಡುತ್ತಾರೆ. ಅದೇ ರೀತಿ, ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ’ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next