Advertisement
ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಡಿಜಿಟಲ್ ಸದಸ್ಯ ನೋಂದಣಿ ಅಭಿಯಾನದ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಎದೆಗುಂದುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಕಾರ್ಯಕರ್ತರು ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪಕ್ಷದ ಬಾವುಟ ಹಿಡಿಯಲು ಸಜ್ಜಾಗಬೇಕೆಂದು ಕರೆ ನೀಡಿದರು.
Related Articles
Advertisement
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಯಾವುದೇ ಪಕ್ಷಕ್ಕೆ ಸದಸ್ಯರೇ ಬುನಾದಿ. ರಾಜ್ಯದಲ್ಲಿ 60 ಲಕ್ಷ ಸದಸ್ಯತ್ವ ಗುರಿ ಇದ್ದು, ಅದರಂತೆ ಬೀದರನಲ್ಲಿ 2 ಲಕ್ಷ ಸದಸ್ಯರನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಕಾಂಗ್ರೆಸ್ ಉಳಿದರೆ ಮಾತ್ರ ರಾಷ್ಟ್ರ ಮತ್ತು ನಾವು ಉಳಿಯಲು ಸಾಧ್ಯ. ಹಾಗಾಗಿ ಬೇರು ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಮತ್ತು ಭ್ರಷ್ಟ ಬಿಜೆಪಿ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಅತ್ಯಧಿಕ ಸದಸ್ಯತ್ವಕ್ಕೆ ಒತ್ತು ಕೊಡಬೇಕಿದೆ ಎಂದು ಹೇಳಿದರು.
ಮಾಜಿ ಕೇಂದ್ರ ಸಚಿವರಾದ ರಾಜ್ಯದ ಪಿಆರ್‌ಒ ಸುದರ್ಶನ ನಾಚಿಯಪ್ಪ ಮಾತನಾಡಿ, ಕಾಂಗ್ರೆಸ್ ಸದಸ್ಯತ್ವದಲ್ಲಿ ಕರ್ನಾಟಕ ಎಂದಿಗೂ ಮುಂಚೂಣಿಯಲ್ಲಿರುತ್ತದೆ. ಸದಸ್ಯತ್ವಕ್ಕೆ ಇನ್ನೊಂದು ವಾರ ಮಾತ್ರ ಅವಕಾಶ ಇದ್ದು, ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
ಶಾಸಕರಾದ ರಾಜಶೇಖರ ಪಾಟೀಲ ಮತ್ತು ರಹೀಮ್ ಖಾನ್ ಮಾತನಾಡಿದರು. ಸಭೆಯಲ್ಲಿ ಅಭಿಯಾನದ ರಾಜ್ಯ ಎಪಿಆರ್‌ಒ ಮೊತಿಲಾಲ್ ದೇವಕಲ್, ಎಂಎಲ್‌ಸಿ ಅರವಿಂದ ಅರಳಿ, ಮಾಜಿ ಶಾಸಕರಾದ ಅಶೋಕ ಖೇಣಿ, ವಿಜಯಸಿಂಗ್, ವೆಂಕಟೇಶ್, ರಘುನಂದನ್, ಸುರೇಶ ಹೆಗಡೆ, ಮಾಲಾ ನಾರಾಯಣ, ನರಸಿಂಗರಾವ್ ಸೂರ್ಯವಂಶಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ದತ್ತು ಮೂಲಗೆ ಇನ್ನಿತರರು ಭಾಗವಹಿಸಿದ್ದರು.
ಬೀದರ್ ನಲ್ಲಿ ಸದಸ್ಯತ್ವಕ್ಕೆ ಅಸಮಾಧಾನ
ಬೀದರ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಕಾಂಗ್ರೆಸ್ ಸದಸ್ಯತ್ವ ಸಮಧಾನಕರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಬೇಸರ ವ್ಯಕ್ತಪಡಿಸಿದರು. ಏಳು ಜನ ಟಿಕೆಟ್ ಕೇಳುವ ಬಸವಕಲ್ಯಾಣ ಕ್ಷೇತ್ರದಲ್ಲಿ ಕೇವಲ 7600 ಸದಸ್ಯತ್ವ ಅಗಿದೆ. 40 ಸಾವಿರ ಸದಸ್ಯತ್ವ ಮಾಡಿ ಟಿಕೆಟ್ ಕೇಳಿದರೆ ಕಿಮ್ಮತ್ತು ಇರುತ್ತದೆ ಎಂದ ಡಿಕೆಶಿ, ಶಾಸಕ ರಹೀಮ್ ಖಾನ್ ಕ್ಷೇತ್ರವಾದ ಬೀದರ ಉತ್ತರದಲ್ಲಿ 7400 ಆಗಿದ್ದು, ಅವರು ನನ್ನ ಶಿಷ್ಯ ಎಂದು ಹೇಳಿಕೊಳ್ಳಲು ನಾಚಿಕೆ ಆಗುತ್ತದೆ ಎಂದು ವ್ಯಂಗ್ಯವಾಡಿದರು. ಭಾಲ್ಕಿ ಕ್ಷೇತ್ರದಲ್ಲಿ 20 ಸಾವಿರ ನೋಂದಣಿ ಆಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮರ್ಯಾದೆ ಉಳಿಸಿಕೊಂಡಿದ್ದಾರೆ. ಇನ್ನೂ ಕಾಂಗ್ರೆಸ್ ಶಾಸಕರಿಲ್ಲದ ಔರಾದ ಕ್ಷೇತ್ರದಲ್ಲಿ 17 ಸಾವಿರಕ್ಕೂ ಅಧಿಕ ಸದಸ್ಯತ್ವ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಹುಮನಾಬಾದನಲ್ಲಿ 17 ಸಾವಿರ ಆಗಿದ್ದು, ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.