Advertisement
ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವುದು ಹೊಸತೇನಲ್ಲ. ಚಾಮರಾಜನಗರ ರೈತ ಸಂಘದವರು, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರ ವಿಚಾರವಾಗಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ನನಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
Related Articles
Advertisement
ಬಿಜೆಪಿಯವರು ಜನೋತ್ಸವ ಆಚರಣೆ ಮಾಡುತ್ತಿದ್ದು,ನಾವು ಕೂಡ ಅವರ ಭ್ರಷ್ಟೋತ್ಸವವನ್ನು ಆಚರಿಸುತ್ತೇವೆ. ಗುತ್ತಿಗೆದಾರರು ಸರ್ಕಾರದ ಭ್ರಷ್ಟಾಚಾರ, ಕಿರುಕುಳ ವಿಚಾರ ತಿಳಿಸಿದಾಗ ವಿರೋಧ ಪಕ್ಷವಾಗಿ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ನಾವು ಈ ರಾಜ್ಯದ ಅಭಿವೃದ್ಧಿ ಪರ ಇರಬೇಕಲ್ಲವೆ ಎಂದರು.
ಪೊಲೀಸ್ ಇಲಾಖೆ ನೇಮಕಾತಿ ಅಕ್ರಮ ನಂತರ ಈಗ ಕೆಪಿಟಿಸಿಎಲ್ ನೇಮಕಾತಿ ಅಕ್ರಮ ಹೊರಬರುತ್ತಿದೆ. ಶಿಕ್ಷಣ ಇಲಾಖೆ ಅಕ್ರಮವೂ ಹೊರಬರುತ್ತಿದೆ. ಪೊಲೀಸ್ ನೇಮಕಾತಿ ಅಕ್ರಮದಲ್ಲಿ ಬಂಧಿತರ ಹೇಳಿಕೆಗಳನ್ನು ಯಾಕೆ ಬಿಡುಗಡೆ ಮಾಡುತ್ತಿಲ್ಲ. ಕೇವಲ ಕೆಲವು ಅಧಿಕಾರಿಗಳು ಹಾಗೂ ಅಭ್ಯರ್ಥಿಗಳನ್ನು ಮಾತ್ರ ಬಲಿ ಪಡೆಯುತ್ತಿದ್ದಾರೆ. ಈ ಅಕ್ರಮಕ್ಕೆ ಕುಮ್ಮಕ್ಕು ನೀಡಿರುವ ಮಂತ್ರಿಗಳ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯ ಶಾಸಕರು ಮಂತ್ರಿಗಳ ಅಕ್ರಮ ಆಸ್ತಿಗಳನ್ನು ತೆಗೆಯಲಿ. ಅವರ ಆಸ್ತಿ ಎಷ್ಟಿತ್ತು, ಅವರ ಮಕ್ಕಳು, ಕಂಪನಿಗಳ ಆಸ್ತಿ ಎಷ್ಟಾಗಿದೆ ಎಂದು ತನಿಖೆ ಮಾಡಿಸಲಿ. ನನ್ನ ಬಳಿಯು ಮಾಹಿತಿ ಇದೆ. ಸಮಯ ಬರಲಿ ಮಾತನಾಡುತ್ತೇನೆ ಎಂದು ತಿಳಿಸಿದರು.