Advertisement
ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ದೇಶದ ಜನತೆ ಹಾಗೂ ರೈತರು ತಮ್ಮ ಭವಿಷ್ಯ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅನ್ನದಾತ ಕೃಷಿಕನ ರಕ್ಷಣೆಗೆ ನಾವು ನಿಲ್ಲಬೇಕಿದೆ ಅದು ನಮ್ಮ ಕರ್ತವ್ಯ ಎಂದು ತಿಳಿಸಿದರು.
Related Articles
Advertisement
ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತ ಬಲಿಕೊಟ್ಟು, ಶ್ರೀಮಂತರ , ಬಂಡವಾಳ ಶಾಹಿಗಳ ಹಿತ ಕಾಯಲಿದೆ. ಹೀಗಾಗಿ ಈ ಕಾಯ್ದೆ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಕಬ್ಬಿಣ, ಸಿಮೆಂಟ್ ಸೇರಿ ದಿನಬಳಕೆ ವಸ್ತುಗಳ ದರ ಏರುತ್ತಲೇ ಇದ್ದು ಸಾಮಾನ್ಯ ಜನರ ಬದುಕಿಗೆ ಹೊರೆಯಾಗಿದೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧದ ಹೋರಾಟ ಚುರುಕು ಮಾಡಬೇಕಾಗಿದೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು.
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಆಹಮದ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.