Advertisement

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ: ಡಿ.ಕೆ. ಶಿವಕುಮಾರ್

08:24 PM Feb 09, 2021 | Team Udayavani |

ಹರಿಹರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಈ ಕಾಯ್ದೆಗೆ ನಮ್ಮ ವಿರೋಧವಿದೆ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರಕಾರದ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದರು.

Advertisement

ಹರಿಹರದ ರಾಜನಹಳ್ಳಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ‌ ಕುರಿತು ಮಾತನಾಡಿರುವ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ‌ ತಮ್ಮದೇ ಸರ್ಕಾರವಿದೆ ಎಂಬ ಕಾರಣಕ್ಕೆ ಬಿಜೆಪಿ‌ಯವರು ಸರ್ವಾಧಿಕಾರಿ ಧೋರಣೆ ತೋರಿಸುತ್ತಿದ್ದಾರೆ. ಕಾಯ್ದೆಯನ್ನು ಜಾರಿಗೊಳಿಸುವಾಗ ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಮಾತನಾಡಲೂ ಅವಕಾಶ ನೀಡಲಿಲ್ಲ ಎಂದು ನುಡಿದರು.

ಕೇವಲ ಧ್ವನಿ ಮತದಿಂದ ಗೋಹತ್ಯೆ ಕಾಯ್ದೆ ಜಾರಿಗೆ ತಂದಿರುವ ಬಿಜೆಪಿ ಸರ್ಕಾರ ತಮ್ಮ  ಅಧಿಕಾರದ ದುರುಪಯೋಗ ಪಡಿಸಿಕೊಂಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ನಾವು  ಖಂಡಿಸುತ್ತೇವೆ ಎಂದರು.

ಇದನ್ನೂ ಓದಿ:‘ರಾಮ್ ತೇರಿ ಗಂಗಾ ಮೈಲಿ’ ನಟ ರಾಜೀವ್ ಕಪೂರ್ ಇನ್ನಿಲ್ಲ

ಈ ಸಂದರ್ಭದಲ್ಲಿ ಬೆಳಗಾವಿಯ ಲೋಕಸಭೆ ಉಪಚುನಾವಣೆ ಕುರಿತು ಮಾತನಾಡಿರುವ ಡಿ.ಕೆ. ಶಿವಕುಮಾರ್ ಉಪಚುನಾವಣೆ ಹಿನ್ನೆಲೆ ಮೂರು ಜನರ ಹೆಸರನ್ನು ವರಿಷ್ಠರಿಗೆ ಶಿಫಾರಸ್ಸು  ಮಾಡಿದ್ದೇವೆ. ಯಾರ ಹೆಸರನ್ನೂ ಅತಿ ಹೆಚ್ಚಾಗಿ ಕಾರ್ಯಕರ್ತರು ಹೇಳುತ್ತಾರೋ ಅವರಿಗೆ ಟಿಕೆಟ್ ಸಿಗಲಿದೆ. ನಾವು‌ ಯಾರೊಬ್ಬರ ಪರವಾಗಿ ಇಲ್ಲ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next