Advertisement

ಹೈಕಮಾಂಡ್‌ ನಾಯಕರ ಜತೆ ಡಿ.ಕೆ.ಶಿವಕುಮಾರ್‌ ಚರ್ಚೆ

07:53 PM Apr 23, 2022 | Team Udayavani |

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ಶನಿವಾರ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಕೆಪಿಸಿಸಿ ಪದಾಧಿಕಾರಿಗಳ ಎರಡನೇ ಹಂತದ ಪಟ್ಟಿ ಸಲ್ಲಿಸಿ ಒಪ್ಪಿಗೆ ಕೋರಿದ್ದಾರೆ.

Advertisement

ರಾಜ್ಯ ಉಸ್ತುವಾರ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಸೇರಿ ಹಲವು ನಾಯಕರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಪಟ್ಟಿ ಸಲ್ಲಿಸಿದ್ದಾರೆ.

ಈಗಾಗಲೇ ಉಪಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ನೇಮಕವಾಗಿದ್ದು, 250 ಕಾರ್ಯದರ್ಶಿಗಳ ನೇಮಕಕ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಪ್ರಸಕ್ತ ವಿದ್ಯಮಾನ, ಈಶ್ವರಪ್ಪ ಅವರ ರಾಜೀನಾಮೆ ನಂತರ ಬಂಧನಕ್ಕಾಗಿ ನಡೆಸುತ್ತಿರುವ ಹೋರಾಟ ಮತ್ತಿತರ ವಿಚಾರಗಳ ಕುರಿತು ನಾಯಕರ ಜತೆ ಸಮಾಲೋಚನೆ ನಡೆಸಿದರು.

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಡಿ.ಕೆ.ಶಿವಕುಮಾರ್‌ ಅವರಿಗೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

Advertisement

ಇದನ್ನೂ ಓದಿ:ಮತ್ತೆ ಎಲೆಕ್ಟ್ರಿಕ್ ವಾಹನದ ಬ್ಯಾಟರಿ ಸ್ಫೋಟ: 1 ಸಾವು, ಮೂವರಿಗೆ ಗಾಯ

ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಬಹುತೇಕ ಎಲ್ಲರಿಗೂ ಅವಕಾಶ ಕಲ್ಪಿಸಿ ಯಾರಿಗೂ ಅಸಮಾಧಾನ ಆಗದಂತೆ ನೋಡಿಕೊಳ್ಳಲು ತೀರ್ಮಾನಿಸಲಾಗಿದೆ. ಚುನಾವಣೆ ವರ್ಷ ಆದ್ದರಿಂದ ಎಲ್ಲರನ್ನೂ ಪಕ್ಷದ ಕೆಲಸಕ್ಕೆ ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಶುಕ್ರವಾರ ರಾತ್ರಿ ದೆಹಲಿಗೆ ತೆರಳಿದ್ದ ಶಿವಕುಮಾರ್‌ ಶನಿವಾರ ರಾತ್ರಿ ವಾಪಸ್ಸಾಗಿದ್ದು, ಭಾನುವಾರ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಪ್ರವಾಸ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next