Advertisement

ಹೊನ್ನಾವರದ ಪರೇಶ್ ಮೇಸ್ತ ಸಾವಿನ ಹಿಂದೆ ಬಿಜೆಪಿಯವರೇ ಭಾಗಿ : ಡಿಕೆಶಿ ಅನುಮಾನ

08:04 PM Feb 27, 2021 | Team Udayavani |

ಉಪ್ಪುಂದ : ಕರಾವಳಿ ಭಾಗದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಸದ್ದು ಮಾಡಿದ ಹೊನ್ನಾವರದ ಪರೇಶ ಮೇಸ್ತ ಅನುಮಾನಾಸ್ಪದ ಸಾವಿನ ಬಗ್ಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಶಿಫಾರಸ್ಸು ಮಾಡಿತ್ತು, ಈಗ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ, ಅವರಿಗೆ ತನಿಖೆ ನಡೆಸಲು ಏನು ಕಷ್ಟ? ಸಾವಿನ ಪ್ರಕರಣದಲ್ಲಿ ಬಿಜೆಪಿಯವರೇ ಭಾಗಿಯಾಗಿದ್ದಾರೆ ಅನ್ನುವ ಅನುಮಾನಗಳು ಇದ್ದು, ಈ ಪ್ರಕರಣವನ್ನು ಅವರು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವುದೇ ಸಾಕ್ಷಿಯಾಗಿದೆ. ನನ್ನ ಮೇಲೆ ಸಿಬಿಐ ತನಿಖೆ ಸೇರಿದಂತೆ ಉಳಿದೆಲ್ಲಾ ಪ್ರಕರಣಗಳನ್ನು ತುರ್ತಾಗಿ ಮಾಡುತ್ತೀರಿ, ಆದರೆ ಮೇಸ್ತ ಪ್ರಕರಣದಲ್ಲಿ ಏಕೆ ವಿಳಂಬಧೋರಣೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Advertisement

ಸಿದ್ದರಾಮಯ್ಯನವರ ಟಾರ್ಗೆಟ್‌ ಸುಳ್ಳು
ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆ ಪ್ರಕ್ರಿಯೆ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟಾರ್ಗೆಟ್‌ ಮಾಡಲಾಗಿದೆ ಎಂಬ ಆರೋಪ ಸುಳ್ಳು, ಯಾರು ಕೂಡಾ ಯಾರನ್ನೂ ಟಾರ್ಗೆಟ್‌ ಮಾಡಿಲ್ಲ, ಇದು ಸ್ಥಳೀಯ ನಾಯಕರು ಸೇರಿಕೊಂಡು ತೆಗೆದುಕೊಂಡ ತೀರ್ಮಾನವಾಗಿದೆ. ಜೆಡಿಎಸ್‌ನವರು ಈ ಬಾರಿ ನಮಗೆ ಮೇಯರ್‌ ಸ್ಥಾನ ನೀಡಬೇಕಾಗಿತ್ತು, ಕೊಡುವ ಭರವಸೆಯನ್ನು ನೀಡಿದ್ದರೂ, ಕೊನೆಗಳಿಗೆಯಲ್ಲಿ ಅವರೇ ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು, ಬಿಜೆಪಿಯರು ಕೂಡಾ ನಾಮ ಪತ್ರ ಸಲ್ಲಿಸಿದ್ದರು, ಆಡಳಿತದಲ್ಲಿ ನಮ್ಮ ಪಕ್ಷವನ್ನು ಉಳಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಕೊನೆಯಲ್ಲಿ ಸ್ಥಳೀಯ ನಾಯಕರೇ ಸೇರಿಕೊಂಡು ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸ್ಥಳೀಯ ನಾಯಕರನ್ನು ಮಾತುಕತೆಗೆ ಕರೆಯಲಾಗಿದೆ. ಇಲ್ಲಿ ಯಾರನ್ನೂ ಕಟ್ಟಿ ಹಾಕುವುದಾಗಿ, ಯಾವ ನಮ್ಮ ನಾಯಕರ ಗೌರವಕ್ಕೆ ಧಕ್ಕೆ ತರುವುವಂತಹ, ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಲು ಅವಕಾಶ ಮಾಡಿಕೊಡುವುದಿಲ್ಲ ಎಂದರು.

ಇದನ್ನೂ ಓದಿ:ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ‘ಟೂರಿಸಂ ಪಾಲಿಸಿ 2025’ ಮಾಸ್ಟರ್ ಪ್ಲಾನ್ : ಯೋಗೇಶ್ವರ್

ಪಂಚಮಸಾಲಿ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು ಜಾತಿ ಮತ್ತು ಮಠದ ವಿಚಾರದ ಬಗ್ಗೆ ಈಗ ಮಾತನಾಡುವುದಿಲ್ಲ, ಈ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next