Advertisement

ಕೋವಿಡ್ ನಿರ್ಬಂಧದ ನಡುವೆಯೂ ಡಿಕೆಶಿ ದೇವಾಲಯ ಭೇಟಿ

02:31 PM May 15, 2021 | Team Udayavani |

ಚಿಂತಾಮಣಿ: ಎಲ್ಲೆಡೆ ಕೋವಿಡ್ ಮಹಾಮಾರಿಯ ಅಬ್ಬರ ಹೆಚ್ಚಾಗಿದ್ದು, ಜನರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ನಡುವೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರದ ದೇವಸ್ಥಾನಕ್ಕೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಆಗಮಿಸಿದ್ದು, ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಘಟನೆ ನಡೆದಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರಕ್ಕೆ ಡಿಕೆಶಿ ಫ್ಯಾಮಿಲಿ ಆಗಮಿಸಿದ್ದು, ಡಿಕೆಶಿ ಆಮಿಸಿದ ವೇಳೆ  ಸ್ಥಳೀಯ ನಾಯಕರುಗಳನ್ನು ಒಳಗೊಂಡಂತೆ ಹಲವಾರು ಜನರು ಪಾಲ್ಗೊಂಡಿದ್ದು, ಈ ವೇಳೆ ಸಾಮಾಜಿಕ ಅಂತರವಿಲ್ಲದೆ ಕೋವಿಡ್ ನಿಯಮ  ಉಲ್ಲಂಘನೆ ಆಗಿದೆ.

ಇದನ್ನೂ ಓದಿ:ಹಿಂದೂ ದೇವರ ನಿಂದನೆ: ತೊಕ್ಕೊಟ್ಟು ನಿವಾಸಿ ಉದ್ಯಮಿಯ ಬಂಧನ

ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳಿಗೆ ಸಾರ್ವಜನಿಕರ ಪ್ರವೇಶದ  ನಿರ್ಬಂಧದ ನಡುವೆಯೂ ಡಿಕೆಶಿ ಗೆ ಮಾತ್ರ ದೇವಸ್ಥಾನ ಓಪನ್ ಆಗಿರುವುದು ಜನಸಾಮಾನ್ಯರಿಗೆ ಒಂದು ನ್ಯಾಯ ಜನಪ್ರತಿನಿಧಿಗಳಿಗೆ ಮತ್ತೊಂದು ನ್ಯಾಯನಾ ಎಂಬಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next