ಬೆಂಗಳೂರು : ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದಲ್ಲಿ ಡಿಜೆ ಹಳ್ಳಿ ಗಲಭೆಯ ಆರೋಪಿ ಸಂಪತ್ ರಾಜ್ ಜತೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದಾರೆ.
ಡಿಕೆಶಿ ಕೆಪಿಸಿಸಿ ಅಧ್ಯಕ್ಷ ರಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಬೆಂಗಳೂರು ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಬಸವೇಶ್ವರ ನಗರದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಡಿಜೆ ಹಳ್ಳಿ ಗಲಭೆಯ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಜತೆಯಾಗಿಯೇ ದೀಪ ಬೆಳಗಿಸಿದ್ದಾರೆ.
ಸಂಪತ್ ರಾಜ್ ರನ್ನು ಕಾಂಗ್ರೆಸ್ ನಿಂದ ಉಚ್ಚಾಟನೆ ಮಾಡಿ ಅಂತ ದಂಬಾಲು ಬೀಳುತ್ತಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರ ಆರೋಪದ ಹೊರತಾಗಿಯೂ ಆರೋಪಿ ಸಂಪತ್ ರಾಜ್ ಜೊತೆಗೆ ವೇದಿಕೆ ಹಂಚಿಕೊಂಡಿರುವ ಡಿ ಕೆ ಶಿವಕುಮಾರ್ ನಡೆ ಸ್ವಪಕ್ಷದಲ್ಲೇ ಬಿರುಕು ಕಾಣುವ ಸಾಧ್ಯತೆಯಿದೆ.
ಇದನ್ನೂ ಓದಿ : ಬೆಂಗಳೂರು ಚಲನಚಿತ್ರೋತ್ಸವ ಹೊರ ಗುತ್ತಿಗೆಗೆ ಆಕ್ರೋಶ!
ಡಿ.ಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್, ಜೈಲಿನಿಂದ ಹೊರ ಬಂದ ಮೇಲೆ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಸನ್ಮಾನ ಕಾರ್ಯಕ್ರಮದಲ್ಲಿ ದಿಢೀರ್ ಪ್ರತ್ಯಕ್ಷರಾದ ಅವರ ಜೊತೆ ಡಿಕೆಶಿ ವೇದಿಕೆ ಹಂಚಿಕೊಂಡಿದ್ದಾರೆ. ಸದ್ಯ ಈ ವಿಚಾರ ಕಾಂಗ್ರೆಸ್ ನಲ್ಲಿ ಯಾವ ದಿಕ್ಕಿನ ಚರ್ಚೆಗೆ ಎಡಮಾಡಿ ಕೊಡುತ್ತದೆ ಎನ್ನುವುದು ಕಾದು ನೋಡಬೇಕಿದೆ.