ದೇವನಹಳ್ಳಿ: ಮಾಜಿ ಸಚಿವ, ಕನಕಪುರ ಶಾಸಕ ಡಿ.ಕೆ ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ.ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಐಟಿ ಹಾಗು ಇಡಿಯನ್ನು ಸೇಡಿನ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಆರೋಪಿಸಿದರು. ಇಡಿ ಯಿಂದ ಶಿವಕುಮಾರ್ ಬಂಧನ ಖಂಡಿಸಿ, ಸೆ.11 ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಜಭವನ ಚಲೋ ಕಾರ್ಯಕ್ರಮದ ಅಂಗವಾಗಿ, ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಂವಿಧಾನಿಕ ಸಂಸ್ಥೆಗಳಾದ ಇಡಿ ಹಾಗು ಐಟಿ ಇಲಾಖೆಯನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡು ಶಿವಕುಮಾರ್‌ರನ್ನ ಹತ್ತಿಕ್ಕುವ ಕಾರ್ಯ ಮಾಡುತ್ತಿದ್ದಾರೆ.ಇದನ್ನು ಖಂಡಿಸಿ, ಬೆಂಗಳೂರಿನಲ್ಲಿ ರಾಜಭವನ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನ್ಯಾಷನಲ್ ಕಾಲೇಜಿನಿಂದ ರಾಜಭವನದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಲಿದೆ.ಈ ಪ್ರತಿಭಟನೆಯಲ್ಲಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಮಾಜಿ ಶಾಸಕ ಮುನಿ ನರಸಿಂಹಯ್ಯ ಮಾತನಾಡಿ, ರಾಜಕೀಯ ದ್ವೇಶದ ಹಿನ್ನಲೆಯಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್‌ರನ್ನ ಬಂಧಿಸಲಾಗಿದೆ.ದೆಹಲಿ ಫ್ಲಾಟ್‌ನಲ್ಲಿ ಸಿಕ್ಕ ಹಣ ನನ್ನೆದಂದು ಸುನಿಲ್‌ಕುಮಾರ್ ಒಪ್ಪಿಕೊಂಡಿದ್ದರೂ, ವಿನಾಕರಣ ಶಿವಕುಮಾರ್‌ರಿಗೆ ಕಿರುಕುಳ ನೀಡಲಾಗುತ್ತಿದೆ.ಕೇಂದ್ರ ಮಾಜಿ ಸಚಿವ ಚಿದಂಬರಂ ನಂತರ ಶಿವಕುಮಾರ್‌ರನ್ನ ಬಂಧಿಸಿ,ರಾಜಕೀಯ ಪಿತೂರಿ ಮೂಲಕ ಕಾಂಗ್ರೆಸ್ ಪಕ್ಷವನ್ನು ನಿರ್ನಾಮ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ.ಆದರೆ,ಇದು ಸಾಧ್ಯವಿಲ್ಲ ಎಂದರು.
ಮುಖಂಡ ವೆಂಕಟಸ್ವಾಮಿ ಮಾತನಾಡಿ, ಸ್ವಾಯತ್ತ ಸಂಸ್ಥೆಗಳಾಗಿ ಕೆಲಸ ಮಾಡಬೇಕಿದ್ದ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಾಯ ಇಲಾಖೆ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ ಟೀಕಿಸಿದರು. ಕೆಪಿಸಿಸಿ ಸದಸ್ಯ ಚೇತನ್ ಗೌಡ ಕೇಂದ್ರದ ಬಿಜೆಪಿ ಸರ್ಕಾರ ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ನಾಯಕರನ್ನು ಹತ್ತಿಕ್ಕುವ ಹುನ್ನಾರ ಮಾಡುತ್ತಿದೆ ಎಂದರು.
ಜಿಪಂ ಸದಸ್ಯರಾದ ಜಿ ಲಕ್ಷ್ಮಿ ನಾರಾಯಣ್, ಕೆ.ಸಿ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್ ಆರ್ ರವಿಕುಮಾರ್, ತಾಪಂ ಅಧ್ಯಕ್ಷೆ ಚೆ„ತ್ರಾ, ಸದಸ್ಯ ಮುನೇಗೌಡ, ಮಾಜಿ ತಾಪಂ ಸದಸ್ಯ ಲಕ್ಷ್ಮಣ್ ಗೌಡ, ತಾಪಂ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಎಸ್‌ಸಿ ವಿಭಾಗದ ಅಧ್ಯಕ್ಷ ಎಮ್ ಲೋಕೇಶ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಾರುತಿ,
ಕೆಪಿಸಿಸಿ ಸದಸ್ಯ ಚಿನ್ನಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿರಾಜು, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ವಿಭಾಗದ ಅಧ್ಯಕ್ಷ ಬೆ„ಚಾಪುರ ರಾಜಣ್ಣ, ಟೌನ್ ಕಾಂಗ್ರೆಸ್ ಅಧ್ಯಕ್ಷ ವೇಣು ಗೋಪಾಲ್, ಪುರಸಭಾ ಸದಸ್ಯರಾದ ಚಂದ್ರಪ್ಪ, ಮಂಜುನಾಥ್, ಮುನಿಕೃಷ್ಣ, ಕುಂದಾಣ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಕೋದಂಡರಾಮ್, ಮುಖಂಡರಾದ ಪ್ರಕಾಶ್, ವೆಂಕಟೇಶಪ್ಪ, ಸೋಮಶೇಖರ್ ಇತರರು ಇದ್ದರು.