Advertisement

D.K.Shivkumar: ಧರ್ಮಸ್ಥಕ್ಕೆ ಡಿಕೆ ಶಿವಕುಮಾರ್‌ ಭೇಟಿ

12:09 AM Apr 23, 2023 | Team Udayavani |

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಶನಿವಾರ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Advertisement

ಮಾಧ್ಯಮದೊಂದಿಗೆ ಮಾತ ನಾಡಿ, “ಶ್ರೀ ಮಂಜುನಾಥನಿಗೆ ಶರಣಾಗಿ ಆಶೀರ್ವಾದ ಪಡೆಯಲು ಬಂದಿದ್ದೇನೆ. ಧರ್ಮ ಯಾವುದಾದರೂ ತಣ್ತೀ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ದೇವನೊಬ್ಬ ನಾಮ ಹಲವು. ಯಾರೂ ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ಹುಟ್ಟಿದ ಬಳಿಕ ಜಾತಿ, ಧರ್ಮದ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಎಲ್ಲರಿಗೂ ಅವರ ವರ ಧರ್ಮಾಚರಣೆಗೆ ಸ್ವಾತಂತ್ರ್ಯವಿದೆ’ ಎಂದು ಹೇಳಿದರು. ಕ್ಷೇತ್ರದ ಪರವಾಗಿ ಅವರನ್ನು ಸ್ವಾಗತಿಸಿ, ಗೌರವಿಸಲಾಯಿತು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಿತ್‌ ಶಿವರಾಂ, ಮಾಜಿ ಸಚಿವ ಅಭಯಚಂದ್ರ ಜೈನ್‌ ಮೊದಲಾದವರಿದ್ದರು.

ಬಳಿಕ ಅವರು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯರು ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next