Advertisement

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

02:54 PM Dec 24, 2024 | Team Udayavani |

ಬೆಳಗಾವಿ: ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ. ಅಷ್ಟೇ ಅಲ್ಲ ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

Advertisement

ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಈಗ ಅದರ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ ಆಮೇಲೆ ನೋಡೋಣ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ ಎಂದು ಸ್ಪಷ್ಟನೆ ನೀಡಿದರು.

ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ನಗರದಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು. ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರೂ, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಹೇಳಿದರು.

ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ದಿನಾಂಕ 26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಈ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್‌ ಪೊಲೀಸರಿಂದ ನಟ ಅಲ್ಲು ಅರ್ಜುನ್‌ ವಿಚಾರಣೆ

Advertisement
Advertisement

Udayavani is now on Telegram. Click here to join our channel and stay updated with the latest news.

Next