Advertisement

Siddaramaiah ಎಲ್ಲ ನಿರ್ಣಯಗಳಿಗೆ ಡಿ.ಕೆ.ಶಿವಕುಮಾರ್ ವಿರೋಧ: ಬೊಮ್ಮಾಯಿ

08:15 PM Oct 07, 2023 | Team Udayavani |

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತೆಗೆದುಕೊಳ್ಳುವ ಎಲ್ಲ ನಿರ್ಣಯಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯದ ಅಂಗಡಿ ತೆರೆಯುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಹೇಳಿದರೇ ಉಪಮುಖ್ಯಮಂತ್ರಿಗಳು ಆಯಕಟ್ಟಿನ ಜಾಗದಲ್ಲಿ ಬಾರ್ ತೆರೆಯಲು ಪರವಣಿಗೆ ನೀಡಲಾಗುತ್ತದೆ ಎಂದು ಹೇಳುತ್ತಿದ್ದಾರೆ. ಇವರ ನಿರ್ಣಯ ಗೊಂದಲದ ಗೂಡಾಗಿದೆ ಎಂದರು.

ಲಿಂಗಾಯತ ಅಧಿಕಾರಿಗಳ ಸ್ಥಾನಮಾನ ವಿಚಾರವಾಗಿ ಶ್ಯಾಮನೂರು ಶಿವಶಂಕರಪ್ಪ ಎತ್ತಿರುವ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕು. ಉತ್ತರ ನೀಡುವವರೆಗೂ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ ಎಂದರು.

ರಾಜ್ಯ ಸರ್ಕಾರ ಜಾತಿಜನಗಣತಿ ಬಿಡುಗಡೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ, ನಾವು ೨೦೧೪-೧೫ ರಲ್ಲಿ ಶೈಕ್ಷಣಿಕ ಮತ್ತು ಆರ್ಥಿಕತೆಯ ಗಣತಿಗೆ ಆಜ್ಞೆ ಮಾಡಿದ್ದೆವು. ಎಲ್ಲೂ ಕೂಡ ಜಾತಿಗಣತಿ ಮಾಡಲು ಹೇಳಿರಲಿಲ್ಲ. ಎಲ್ಲರಿಗೂ ಕೂಡ ಗೊತ್ತಿದೆ ಇದು ಜಾತಿಗಣತಿಯಲ್ಲ.ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಆಡಳಿತವನ್ನು ಸುಸೂತ್ರವಾಗಿ ನಡೆಸಲು ಆಗುವುದಿಲ್ಲ. ಒಂದು ವರ್ಗವನ್ನು ಪೊಲೀಸರು ಮುಟ್ಟಬಾರದು ಅಂತ ಪರೋಕ್ಷವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಸಮಾಜಘಾತಕ ಶಕ್ತಿಗಳಿಗೆ ಕಾನೂನು, ಪೊಲೀಸ್, ಸರ್ಕಾರದ ಭಯ ಇಲ್ಲ. ಸರ್ಕಾರ ಬಂದ ನಂತರ ಸಮಾಜಘಾತಕ ಶಕ್ತಿಗಳಿಗೆ ಪ್ರಚೋದನೆ ಸಿಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next