Advertisement

ಸಿಂಘ್ವಿ ಗೈರು; ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆ

09:42 AM Oct 15, 2019 | Team Udayavani |

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ.

Advertisement

ಡಿಕೆ ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಹಾಜರಾಗದಿದ್ದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡುವಂತೆ ಕಿರಿಯ ವಕೀಲರು ಮನವಿ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಪೀಠ ನಾಳೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಗುರುವಾರ, ಶುಕ್ರವಾರ ಜಾರಿ ನಿರ್ದೇಶನಾಲಯದ ಪರ ವಕೀಲರು ವಾದ ಮಂಡಿಸಲಿದ್ದಾರೆ. ಇಂದು ಇ.ಡಿ. ಅಧಿಕಾರಿಗಳು ಕೋರ್ಟ್ ಗೆ ತನಿಖಾ ವರದಿಯನ್ನು ಸಲ್ಲಿಸಿದರು.

ಕೋರ್ಟ್ ನಲ್ಲಿ ಮಂಗಳವಾರ ಡಿಕೆ ಶಿವಕುಮಾರ್ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next