Advertisement
2013ರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ವಿರುದ್ಧ, 2014 ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಮುನಿರಾಜು ಗೌಡ ವಿರುದ್ಧ ಮತ್ತು ಇದೀಗ ಬಿಜೆಪಿಯ ಅಶ್ವತ್ಥನಾರಾಯಣ ವಿರುದ್ಧ ಡಿ.ಕೆ.ಸುರೇಶ್ ಜಯಭೇರಿ ಭಾರಿಸಿದ್ದಾರೆ. ಸತತ 3ನೇ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
Related Articles
Advertisement
2014ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಮುನಿರಾಜು ಗೌಡ, ಡಿ.ಕೆ.ಸುರೇಶ್ ವಿರುದ್ಧ ಸೋಲುಂಡಿದ್ದರು. ಆಗ ಡಿ.ಕೆ.ಸುರೇಶ್ 4,21,243 ಮತಗಳನ್ನು ಪಡೆದು ಕೊಂಡಿದ್ದರು. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಅಶ್ವತ್ಥನಾರಾಯಣ 6,71,388 ಮತಗಳನ್ನು ಪಡೆದುಕೊಂಡಿದ್ದಾರೆ. 2014ರ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಮತಗಳಿಕೆಯ ಪ್ರಮಾಣವೂ ಹೆಚ್ಚಾಗಿದೆ. ರಾಮನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮೋದಿ ಅಲೆಗೆ ಸ್ಪಂದನೆ ಸಿಕ್ಕಿಲ್ಲ ಎಂದು ಮೈತ್ರಿ ಪಕ್ಷಗಳ ಕಾರ್ಯಕರ್ತರು ಹೇಳಿದ್ದಾರೆ.
ಜನರು ಇನ್ನಷ್ಟು ನಿರೀಕ್ಷೆ ಇರಿಸಿಕೊಂಡು ನಮ್ಮನ್ನು ಮತ್ತೆ ಗೆಲ್ಲಿಸಿಕೊಂಡಿದ್ದಾರೆ. ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿ ಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಕ್ಷೇತ್ರದಲ್ಲಿ ಮೈತ್ರಿ ಪಕ್ಷಗಳ ಕಾರ್ಯಕರ್ತರ ಶ್ರಮ ಸಾರ್ಥಕವಾಗಿದೆ.-ಡಿ.ಕೆ.ಸುರೇಶ್, ಸಂಸದ ಮತದಾರರ ತೀರ್ಪಿಗೆ ತಲೆಬಾಗುತ್ತೇನೆ. ಚುನಾವಣೆಗೆ ನಿಲ್ಲುವ ನಿರೀಕ್ಷೆಯೇ ಇಲ್ಲದೆ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯಾಗಿದ್ದೇನೆ. ಅಲ್ಪ ಸಮಯದಲ್ಲೇ ಮತದಾರರನ್ನು ತಲುಪುವ ಪ್ರಯತ್ನ ಮಾಡಿದ್ದೇನೆ. ಕ್ಷೇತ್ರದಲ್ಲಿ ಪಕ್ಷ ಸಂಘ ಟನೆ ಜೊತೆಗೆ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ.
-ಅಶ್ವತ್ಥನಾರಾಯಣ, ಬಿಜೆಪಿ ಅಭ್ಯರ್ಥಿ ಬೆಂ.ಗ್ರಾಮಾಂತರ (ಕಾಂಗ್ರೆಸ್)
-ವಿಜೇತರು ಡಿ.ಕೆ.ಸುರೇಶ್
-ಪಡೆದ ಮತ 8,78,258
-ಎದುರಾಳಿ ಅಶ್ವತ್ಥನಾರಾಯಣ (ಬಿಜೆಪಿ)
-ಪಡೆದ ಮತ 6,71,388
-ಗೆಲುವಿನ ಅಂತರ 2,06,870 ಗೆಲುವಿಗೆ 3 ಕಾರಣ
-ಜಿಲ್ಲೆಯ ವಿವಿಧೆಡೆ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ
-ರಾಜ್ಯದಲ್ಲೇ ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡಿದ್ದು
-ನಿರಂತರ ಪ್ರವಾಸ, ಯೋಜನೆ ಗಳ ಅನುಷ್ಠಾನ, ಸಾಮಾನ್ಯರಿಗೆ ಸುಲಭವಾಗಿ ಸಿಗುತ್ತಿದ್ದದ್ದು. ಸೋಲಿಗೆ 3 ಕಾರಣ
-ಬೆಂಗಳೂರು ನಗರ ಜಿಲ್ಲೆ ಹೊರತು ಪಡಿಸಿದರೆ ರಾಮನಗರಕ್ಕೆ ಹೊಸ ಮುಖ
-ರಾಮನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಸಮರ್ಥ ಬಿಜೆಪಿ ಅಭ್ಯರ್ಥಿ ಇಲ್ಲದಿರುವುದು.
-ಸಿ.ಪಿ.ಯೋಗೇಶ್ವರ್ ಮತ್ತು ಜಿಲ್ಲಾ ಬಿಜೆಪಿ ಘಟಕದೊಂದಿಗೆ ಬಾಂಧವ್ಯ ಹಳಿಸಿದ್ದು