ಬೆಂಗಳೂರು: ಮತ್ತೊಂದು ಸುತ್ತಿನ ಪದಾಧಿಕಾರಿಗಳ ಪಟ್ಟಿ ಸಿದ್ದಪಡಿಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಪಡೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ(ಆಗಸ್ಟ್ 16) ರಾತ್ರಿ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕಾಶ್ಮೀರಿ ಪಂಡಿತ್ ಹತ್ಯೆ ಪ್ರಕರಣ: ಆರೋಪಿ ಉಗ್ರನ ಮನೆ ಜಪ್ತಿ, ತಂದೆ, ಸಹೋದರರ ಬಂಧನ
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಜತೆಯಲ್ಲೇ ಶಿವಕುಮಾರ್ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಈಗಾಗಲೇ ಪ್ರಕಟವಾದ ಪದಾಧಿಕಾರಿಗಳ ಪಟ್ಟಿಗೆ ಹೆಚ್ಚುವರಿಯಾಗಿ ಕಾರ್ಯದರ್ಶಿಗಳು, ಜಿಲ್ಲಾಧ್ಯಕ್ಷರು ಹಾಗೂ ಕೆಲ ಮುಂಚೂಣಿ ಘಟಕಗಳಿಗೆ ಈ ಸಂದರ್ಭದಲ್ಲಿ ಹೊಸ ಪದಾಧಿಕಾರಿಗಳ ಸೇರ್ಪಡೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ನಡುವಿನ ವಿರಸದಿಂದ ಮೊದಲ ಪಟ್ಟಿ ಬಿಡುಗಡೆಗೆ ಸಾಕಷ್ಟು ವಿಳಂಬವಾಗಿತ್ತು. ಆದರೆ ಈ ಬಾರಿ ಅಂಥ ಯಾವುದೇ ಸಂದರ್ಭಗಳು ಸೃಷ್ಟಿಯಾಗಿಲ್ಲ ಎನ್ನಲಾಗಿದೆ.