Advertisement

ಇಂದು ದ.ಕ., ಉಡುಪಿ, ಕಾಸರಗೋಡು ಶಾಲೆಗಳಿಗೆ ರಜೆ

01:56 AM Jul 23, 2019 | Sriram |

ಮಂಗಳೂರು: ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜು. 23ರಂದು ದ. ಕನ್ನಡ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಅಂಗನವಾಡಿ ಮತ್ತು ಕಾಲೇಜುಗಳಿಗೆ (ಪದವಿಪೂರ್ವ ತರಗತಿವರೆಗೆ) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಮತ್ತು ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ತಿಳಿಸಲಾಗಿದೆ. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ ಅಥವಾ ಸಮುದ್ರ ತೀರಕ್ಕೆ ತೆರಳಬಾರದು. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್‌ ರೂಂ 1077 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉಡುಪಿಯಲ್ಲೂ ರಜೆ
ಉಡುಪಿ: ಭಾರೀ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಜುಲೈ 23ರ ಮಂಗಳವಾರದಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಕಾಸರಗೋಡು: ಶಾಲಾ ಕಾಲೇಜುಗಳಿಗೆ ಇಂದು ರಜೆ
ಕಾಸರಗೋಡು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿರುವ ಹಿನ್ನೆಲೆ ಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲ ಶಾಲಾ ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಡಾ| ಡಿ.ಸಜಿತ್‌ ಬಾಬು ತಿಳಿಸಿದ್ದಾರೆ.

ಕರಾವಳಿಯಾದ್ಯಂತ ರೆಡ್‌ ಅಲರ್ಟ್‌
ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ದ.ಕ., ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಜು. 24ರ ವರೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಜು.23 ಮತ್ತು ಜು.24ರಂದು ತಲಾ 205 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next