Advertisement
ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ದಲ್ಲಿ ಹೊರ ಜಿಲ್ಲೆಗಳಿಗೆ ತೆರಳುವ ಪ್ರಯಾ ಣಿಕರು ಕೊಂಚ ಆತಂಕಕ್ಕೆ ಒಳಗಾಗಿದ್ದರು. ಮೈಸೂರು, ಬೆಂಗಳೂರು ಸಹಿತ ವಿವಿಧೆಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಈ ಕಡೆಗಳಿಗೆ ಮಂಗಳೂರು ವಿಭಾಗದಿಂದ ತೆರಳುವ ಕೆಲವು ಬಸ್‌ಗಳು ಸಂಚ ರಿಸಲಿಲ್ಲ. ವಿದ್ಯಾರ್ಥಿಗಳು, ಹೊರ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು. ಬೆಳಗ್ಗೆ 10.30ರ ಬಳಿಕ ಕೆಎಸ್‌ಆರ್‌ಟಿಸಿ ಸಂಚಾರ ಸಹಜ ಸ್ಥಿತಿಗೆ ಮರಳಿತು.
Related Articles
ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣ ಗೌಡ ಬಣದ ದ.ಕ. ಘಟಕವು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಕೇರಳಕ್ಕೆ ತೆರಳುವ ರೈಲನ್ನು ತಡೆದು ಪ್ರತಿಭಟನೆ ನಡೆಸಿತು.ಈ ಸಂದರ್ಭದಲ್ಲಿ ತುಳು ರಕ್ಷಣಾ ವೇದಿಕೆ ಕಾರ್ಯಕರ್ತರು ಮತ್ತು ಸ್ಥಳೀಯರು ಕರವೇ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡು, ನೇತ್ರಾವತಿ ತಿರುವು ಯೋಜನೆ ವಿರುದ್ಧ ಪ್ರತಿಕ್ರಿಯಿಸದ ನೀವು ಈಗೇಕೆ ಬೆಂಬಲ ನೀಡಿದ್ದೀರಿ ಎಂದು ಪ್ರಶ್ನಿಸಿದರು.
Advertisement
ಬಸ್ ನಿಲುಗಡೆಗೆ ಆದೇಶಿಸಿಲ್ಲಮಹಾದಾಯಿ ನದಿ ನೀರಿನ ಸಮಸ್ಯೆ ನಿವಾ ರಣೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಕರಾವಳಿ ಸಹಿತ ಎಲ್ಲೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ರದ್ದು ಮಾಡುವಂತೆ ಕೆಎಸ್‌ಆರ್‌ಟಿಸಿ ನಿಗಮ ದಿಂದ ಯಾವುದೇ ಅಧಿಕೃತ ಆದೇಶ ನೀಡಿಲ್ಲ. ಆದರೆ ಬೆಂಗಳೂರು ಮತ್ತಿತರ ಭಾಗ ಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸ್‌ಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಮುಂಚಿತ ವಾಗಿ ಬಸ್ ಸಂಚಾರ ರದ್ದುಗೊಳಿಸಲಾಗಿತ್ತು.
ಕೆ. ಗೋಪಾಲ ಪೂಜಾರಿ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು